Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ ವಿಧಾನಸಭಾ ಮತ್ತು ಲೋಕಸಭಾ ಮತಕ್ಷೇತ್ರಗಳು..!

ಬೆಳಗಾವಿ: ಇಡೀ ದೇಶದಲ್ಲಿ ನಡೆಯುತ್ತಿರುವ ಜನಗಣತಿ ನಂತರ ಲೋಕಸಭೆ ಮತ್ತು ವಿಧಾನಸಭಾ ಮತಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅದರಂತೆ ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ವಿಧಾನಸಭೆ ಮತ್ತು ಲೋಕಸಭಾ ಮತಕ್ಷೇತ್ರಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಗೋಚರಿಸಿದೆ. ಒಂದು ಮಾಹಿತಿ ಪ್ರಕಾರ ಇನ್ನೂ ಒಂದು ಲೋಕಸಭಾ ಮತಕ್ಷೇತ್ರ ಹಾಗೂ ಎಂಟು ವಿಧಾನಸಭಾ ಮತಕ್ಷೇತ್ರಗಳು ಏರಿಕೆಯಾಗಬಹುದು.


ಬೆಳಗಾವಿ ಜಿಲ್ಲೆಯಲ್ಲಿ ಭಾಷೆಯ ಕಾರಣಕ್ಕೆ ಕ್ಷೇತ್ರ ಪುನೃ ವಿಂಗಡನೆ ಅತ್ಯಂತ ಮಹತ್ವದ್ದಾಗಿದೆ. ಆ ಲೆಕ್ಕಾಚಾರದ ಮೇಲೆಯೇ ಹೆಚ್ಚಾಗಿ ಕ್ಷೇತ್ರ ಪುನರ್ವಿಂಗಡಣೆಗೆ ಆಡಳಿತ ಕೈ ಹಾಕಲಿದೆ.

ಮಹಿಳಾ ಮೀಸಲಾತಿ ಜಾರಿಯಿಂದಾಗಿ ಒಂದೆರಡು ಮಹಿಳಾ ಕ್ಷೇತ್ರಗಳು ಬರಲಿವೆ.
ಕಿತ್ತೂರು ಮತ್ತು ಖಾನಾಪುರ ವಿಧಾನಸಭಾ ಮತಕ್ಷೇತ್ರ ಸದ್ಯ ಕೆನರಾ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಗೆ ಬರುತ್ತಿದೆ. ಭವಿಷ್ಯದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಹೊಸದಾಗಿ ರೂಪುಗೊಳ್ಳುವ ಕ್ಷೇತ್ರಕ್ಕೆ ಇವೆರಡು ವಿಧಾನಸಭಾ ಮತಕ್ಷೇತ್ರಗಳು ಸೇರಬಹುದು. ಬೆಳಗಾವಿಯಲ್ಲಿ ಭಾಷಾ ವಿವಾದ ಕಾರಣಕ್ಕೆ ಮೊದಲಿನಿಂದಲೂ ಕನ್ನಡ ಭಾಷಿಕರ ಬಾಹುಳ್ಯ ಇರುವ ಕೆನರಾ ಲೋಕಸಭಾ ಮತಕ್ಷೇತ್ರಕ್ಕೆ ಸೇರಿಸಲಾಗಿತ್ತು. ಅದನ್ನು ಹೊರತುಪಡಿಸಿ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಗಳು ಸದ್ಯ ಅಸ್ತಿತ್ವದಲ್ಲಿವೆ. ಸದ್ಯದ ಮಾಹಿತಿ ಪ್ರಕಾರ ಇನ್ನೂ ಒಂದು ಲೋಕಸಭಾ ಮತಕ್ಷೇತ್ರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 18 ವಿಧಾನಸಭಾ ಮತಕ್ಷೇತ್ರಗಳಿವೆ. ಈ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ. ಅದರಲ್ಲೂ ಜಿಲ್ಲಾ ಕೇಂದ್ರವಾಗಿರುವ ಬೆಳಗಾವಿಯಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚಾಗಿದ್ದು ವಿಧಾನಸಭಾ ಕ್ಷೇತ್ರಗಳು ಸಹಜವಾಗಿ ಹೆಚ್ಚಲಿದೆ.

ಸದ್ಯ ಎಷ್ಟು ಕ್ಷೇತ್ರಗಳು ಹೆಚ್ಚಳವಾಗುತ್ತವೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಿಲ್ಲ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ನಿಖರವಾಗಲಿದೆ. ಇದರಿಂದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬೇಕು ಎಂದು ಬಯಸುವ ಆಕಾಂಕ್ಷಿಗಳಲ್ಲಿ ಇನ್ನಷ್ಟು ಹುರುಪು ಮೂಡಿದ್ದು ತಾವು ಯಾವ ಮತಕ್ಷೇತ್ರದಿಂದ ಸ್ಪರ್ಧಿಸಿದರೆ ಅನುಕೂಲ ಎಂಬ ಲೆಕ್ಕಾಚಾರವನ್ನು ಮುಂದಿನ ದಿನಗಳಲ್ಲಿ ಹಾಕಲಿದ್ದಾರೆ.

ಒಟ್ಟಾರೆ ಕ್ಷೇತ್ರ ಪುನರ್ವಿಂಗಡಣೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮತ್ತಷ್ಟು ಕ್ಷೇತ್ರಗಳ ಹೆಚ್ಚಳವಾಗಲಿದ್ದು ಈಗ ಎಲ್ಲೆಡೆ ಕ್ಷೇತ್ರ ಪುನರ್ ವಿಂಗಡನೆ ಬಗ್ಗೆ ಚರ್ಚೆ ಹರಿದಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ