LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಮಾಚಲದಲ್ಲಿ ಮೇಘಸ್ಫೋಟ: ಮಧ್ಯರಾತ್ರಿ ಬೊಗಳಿ 67 ಜನರ ಪ್ರಾಣ ಉಳಿಸಿದ ಸಾಕು ನಾಯಿ

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ ಸುಮಾರು 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿ ೮೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ದುರಂತದ ನಡುವೆ ಮಂಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು ಬೊಗಳಿದ್ದರಿಂದ 20 ಕುಟುಂಬಗಳ 67 ಜನರು ಕೊನೆ ಕ್ಷಣದಲ್ಲಿ ಸಾವಿನ ದವಡೆಯಿಂದ ಬಚಾವಾಗಿದ್ದಾರೆ.

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ಮನೆಯ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕು ನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ರಾತ್ರಿ ಇಷ್ಟೊಂದು ಬೊಗಳದ ನಾಯಿ ಯಾಕೆ ಈ ಪರಿ ಬೊಗಳುವುದನ್ನು ನೋಡಿ ಅಚ್ಚರಿಗೊಂಡು ನರೇಂದ್ರ ಎಚ್ಚರಗೊಂಡಿದ್ದಾರೆ. ನಂತರ ನಾಯಿ ಬೊಗಳಿದ ಜಾಗದ ಬಳಿ ಹೋದಾಗ ಮನೆಯ ಗೋಡೆಯಲ್ಲಿ ದೊಡ್ಡ ಬಿರುಕು ಮೂಡಿದ್ದನ್ನು ನೋಡಿದ್ದಾರೆ. ನೋಡುತ್ತಿರುವಾಗಲೇ ಆ ಬಿರುಕಿನ ಮೂಲಕ ನೀರು ಮನೆ ಒಳಗಡೆ ಹರಿಯಲು ಆರಂಭಿಸಿತ್ತು

ನೀರು ಮನೆಗೆ ನುಗ್ಗಿದೆ ಎಂಬುದು ತಿಳಿಯುತ್ತಿದ್ದಂತೆ ನಾಯಿಯ ಜೊತೆ ಕೆಳಗಡೆ ಮಲಗಿದ್ದ ಕುಟುಂಬದ ಸದಸ್ಯರನ್ನು ಎಬ್ಬಿಸಿ ಕೂಡಲೇ ಹೊರ ಬಂದಿದ್ದಾರೆ. ಬಳಿಕ ಸಮೀಪದಲ್ಲಿ ಇದ್ದ ನೆರೆ ಹೊರೆಯ ನಿವಾಸಿಗಳನ್ನು ಎಬ್ಬಿಸಿ ಮನೆಯಿಂದ ಹೊರ ಬಂದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ತಿಳಿಸಿದ್ದಾರೆ.

ಈ ವೇಳೆ ಭಾರೀ ಮಳೆ ಸುರಿಯುತ್ತಲೇ ಇತ್ತು. ಕೂಡಲೇ ಗ್ರಾಮಸ್ಥರು ಮನೆಯನ್ನು ತೊರೆದು ಓಡಿದ್ದಾರೆ. ಮನೆ ತೊರೆದ ಕೆಲ ಸಮಯದಲ್ಲಿ ಈ ನಿವಾಸಿಗಳು ಮಲಗಿದ್ದ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ತೀವ್ರ ಮಳೆಯಿಂದಾಗಿ ಗ್ರಾಮವು ಭೂಕುಸಿತಕ್ಕೆ ಒಳಗಿದ್ದು ಸುಮಾರು ಒಂದು ಡಜನ್ ಮನೆಗಳು ನೆಲಸಮವಾಗಿದೆ. ಗ್ರಾಮದಲ್ಲಿ ಈಗ ಕೇವಲ ನಾಲ್ಕೈದು ಮನೆಗಳು ಮಾತ್ರ ಉಳಿದುಕೊಂಡಿದೆ. ಉಳಿದವು ಭೂಕುಸಿತದಿಂದ ನೆಲಸಮವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026