ಕಲಬುರಗಿ: ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ.
ಈಶ್ವರ್ ರಾಥೋಡ್ ಕಾಲಿಗೆ ಫೈರಿಂಗ್ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಟೇಷನ್ ಬಜಾರ್ ಠಾಣೆ ಪೋಲಿಸರು ಕೊಲೆ ಆರೋಪಿ ಈಶ್ವರ್ ರಾಥೋಡ್ ಎರಡು ಕಾಲಿಗೆ ಗುಂಡು ಹಾರಿಸಿದ್ದಾರೆ. ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಉದ್ಯಮಿ ಅನಿಲ್ ರಾಥೋಡ್ ಕೊಲೆ ನಡೆದಿತ್ತು. ಕೊಲೆ ನಡೆದ ಎರಡು ದಿನದಲ್ಲಿ ಆರೋಪಿ ಈಶ್ವರ್ ರಾಥೋಡ್ ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿ ಈಶ್ವರ್ ರಾಥೋಡ್ ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.