Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಸೌದಿ ವಿಮಾನ ನಿಲ್ದಾಣದ ಮೇಲೆ ದಾಳಿ: ಭಾರತೀಯ ಸೇರಿ ಇಬ್ಬರ ಸಾವು, 8 ಮಂದಿಗೆ ಗಾಯ

ರಿಯಾದ್, ಅ. 22: ಸೌದಿ ಅರೇಬಿಯಾದ ದಮ್ಮಾಮ್ ನಗರದ ಕಿಂಗ್ ಫಹದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬುಧವಾರ ರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಭಾರತೀಯರು ಸೇರಿ 8 ಮಂದಿ ಗಾಯಗೊಂಡಿದ್ದಾರೆ. ದಾಳಿಯಿಂದ ವಿಮಾನ ನಿಲ್ದಾಣದ ಕೆಲವು ಭಾಗಗಳಿಗೆ ಹಾನಿಯಾಗಿದ್ದು, ವಿಮಾನಗಳ ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಮೃತರಲ್ಲಿ ಒಬ್ಬರು ಭಾರತೀಯರಾಗಿದ್ದು, ಮತ್ತೊಬ್ಬರು ಸೌದಿ ಅರೇಬಿಯಾದ ಪ್ರಜೆ ಎಂದು ಅಲ್ಲಿನ ನಾಗರಿಕ ವಿಮಾನಯಾನ ಪ್ರಾಧಿಕಾರ ಖಚಿತಪಡಿಸಿದೆ. ಗಾಯಗೊಂಡವರಲ್ಲಿ ಇಬ್ಬರು ಭಾರತೀಯರು, ಇಬ್ಬರು ಯೆಮನ್ ಪ್ರಜೆಗಳು, ಇಬ್ಬರು ಬಾಂಗ್ಲಾದೇಶದವರು ಹಾಗೂ ನೇಪಾಳ ಮತ್ತು ಸೌದಿ ಅರೇಬಿಯಾದ ತಲಾ ಒಬ್ಬರು ಸೇರಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ದಾಳಿಯ ಪರಿಣಾಮ ವಿಮಾನ ನಿಲ್ದಾಣದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿತ್ತು. ಭದ್ರತಾ ಪರಿಶೀಲನೆ ಹಾಗೂ ಹಾನಿಯ ಮೌಲ್ಯಮಾಪನದ ಬಳಿಕ ವಿಮಾನ ಸಂಚಾರವನ್ನು ಪುನರಾರಂಭಿಸಲಾಗಿದ್ದು, ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಿದೆ ಎಂದು ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿರುವುದು ಹಾಗೂ ಮತ್ತಿಬ್ಬರು ಗಾಯಗೊಂಡಿರುವುದನ್ನು ದೃಢಪಡಿಸಿದೆ. ಮೃತರು ಮತ್ತು ಗಾಯಾಳುಗಳ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದ್ದು, ಸಂತ್ರಸ್ತರ ಕುಟುಂಬಗಳನ್ನು ಸಂಪರ್ಕಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದೆ.

ಇದೇ ವೇಳೆ ಸೌದಿ ಅರೇಬಿಯಾದ ಪ್ರಮುಖ ತೈಲ ಉತ್ಪಾದನಾ ಕೇಂದ್ರವಾದ ಶೈಬಾ ತೈಲಕ್ಷೇತ್ರದ ಮೇಲೂ ಬುಧವಾರ ಬೆಳಿಗ್ಗೆ ಡ್ರೋನ್ ದಾಳಿ ನಡೆಸಲು ಯತ್ನಿಸಲಾಗಿದೆ. ಸೌದಿ ವಾಯು ರಕ್ಷಣಾ ವ್ಯವಸ್ಥೆ ಡ್ರೋನ್ ಅನ್ನು ಹೊಡೆದುರುಳಿಸಿದರೂ ಅದರ ಅವಶೇಷಗಳು ಬಿದ್ದ ಪರಿಣಾಮ ಇಬ್ಬರು ವಿದೇಶಿ ಕಾರ್ಮಿಕರು ಮೃತಪಟ್ಟಿದ್ದು, ಭಾರತೀಯ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಈ ಘಟನೆಯಲ್ಲಿ ಫಿಲಿಪ್ಪೀನ್ಸ್ ಮತ್ತು ನೇಪಾಳದ ತಲಾ ಒಬ್ಬರು ಮೃತಪಟ್ಟಿದ್ದು, ಭಾರತ ಹಾಗೂ ಪಾಕಿಸ್ತಾನದ ತಲಾ ಒಬ್ಬರು ಗಾಯಗೊಂಡಿದ್ದಾರೆ. ಡ್ರೋನ್ ಅವಶೇಷಗಳು ತೈಲಕ್ಷೇತ್ರದ ಹೊರಭಾಗದಲ್ಲಿದ್ದ ಗುತ್ತಿಗೆದಾರರ ವಾಹನದ ಮೇಲೆ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ತೈಲ ಉತ್ಪಾದನಾ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗಿಲ್ಲ ಎಂದು ಸೌದಿ ಇಂಧನ ಸಚಿವಾಲಯ ಸ್ಪಷ್ಟಪಡಿಸಿದೆ.

ಯೆಮನ್‌ನ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಇತ್ತೀಚಿನ ದಿನಗಳಲ್ಲಿ ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು ಹಾಗೂ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸುತ್ತಿದ್ದಾರೆ. ಆದರೆ ದಮ್ಮಾಮ್ ವಿಮಾನ ನಿಲ್ದಾಣದ ಮೇಲಿನ ಈ ನಿರ್ದಿಷ್ಟ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಅಧಿಕೃತವಾಗಿ ಹೊತ್ತುಕೊಂಡಿಲ್ಲ.

ಸೌದಿ ಅರೇಬಿಯಾದ ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಭಾರತ ಖಂಡಿಸಿದ್ದು, ಪ್ರಾದೇಶಿಕ ಶಾಂತಿ ಮತ್ತು ಸಹಜ ಪರಿಸ್ಥಿತಿ ಶೀಘ್ರ ಮರುಸ್ಥಾಪನೆಯಾಗುವ ವಿಶ್ವಾಸ ವ್ಯಕ್ತಪಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ