Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅಶ್ಲೀಲ ಪದ ಬಳಕೆ ಆರೋಪ ಸಿ ಟಿ ರವಿ ಮೇಲೆ ಹಲ್ಲೆಗೆ ಯತ್ನ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಸಿ ಟಿ ರವಿ ಅವರು ಬಳಕೆ ಮಾಡಿರುವ ಅಶ್ಲೀಲ ಪದ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ.


ಸಿಟಿ ರವಿ ಅವರು ವಿಧಾನ ಪರಿಷತ್ ಕಾರಿಡಾರ್​ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕಾಏಕಿ ಅಡ್ಡ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ನೂರಾರು ಬೆಂಬಲಿಗರು ಘೋಷಣೆ ಕೂಗಿ ಸಿಟಿ ರವಿ ಮೇಲೆ ಮುಗಿಬಿದ್ದಿದ್ದು, ಹಲ್ಲೆಗೆ ಯತ್ನ ನಡೆದಿದೆ ಎನ್ನಲಾಗಿದೆ.

ಕೂಡಲೇ ಮಾರ್ಷಲ್​ಗಳು, ಕಾರಿಡಾರ್ ಗೇಟ್ ಬಂದ್ ಮಾಡಿದರು. ಹೀಗಾಗಿ ಸಿಟಿ ರವಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಗಲಿಗರು ಏಕ ವಚನದಲ್ಲೇ ಸಿಟಿ ರವಿ ಅವರನ್ನು ಕುರಿತು ಏನೋ ಸೂ
….ಮಗನೇ…. ನಮ್ಮಕ್ಕನಿಗೆ ಹೀಗಂದ್ಯಾ ಎಂದು ಓರ್ವ ವ್ಯಕ್ತಿ ಒದೆಯುವ ರೀತಿಯಲ್ಲಿ ಕಾಲೆತ್ತಿದ್ದಾನೆ. ಆಗ ಏನೋ ಎಂದ ರವಿ ಪ್ರಶ್ನಿಸಿದ್ದಾರೆ. ಆಗ ಸಿಟಿ ರವಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಏಯ್‌, ಆಚೆ ಬಾರೋ, ಧೈರ್ಯವಿದ್ದರೆ ಹೊರಗೆ ಬಾ ಎಂದು ಏಕ ವಚನದಲ್ಲೇ ಆವಾಜ್‌ಹಾಕಿದ್ದಾರೆ. ಈ ವೇಳೆ ಒಂದಿಬ್ಬರು ಹಲ್ಲೆಗೂ ಯತ್ನಿಸಿದ ಪ್ರಸಂಗ ನಡೆದಿದೆ ಎನ್ನಲಾಗಿದೆ.

ಹೆಬ್ಬಾಳ್ಕರ್‌ಬೆಂಬಲಿಗರ ವಿರುದ್ಧ ಕೆಂಡಾಮಂಡಲರಾದ ಸಿ.ಟಿ ರವಿ ʻಬಾ.. ಬಾ.. ಹೊಡಿ ಬಾ.., ಅದೇನ್‌ಮಾಡ್ತಾರೆ ಮಾಡ್ಲಿ ಬಿಡ್ರಿ ಎಂದಿದ್ದಾರೆ. ಇದರಿಂದ ದೊಡ್ಡ ಗಲಾಟೆ ಉಂಟಾಗಿದ್ದು, ಕೂಡಲೇ ಪೊಲೀಸರು ದೌಡಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರನ್ನು ಚದುರಿಸಿದ್ದಾರೆ. ಅಲ್ಲದೇ ಕೆಲ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಟಿ ರವಿ ಮೇಲೆ ಗಲಾಟೆ ನಡೆಯುವ ಸ್ಥಳದಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್​ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕಾಣಿಸಿಕೊಂಡಿದ್ದಾರೆ.

ಸಿಟಿ ರವಿ ಘಟನೆ ಕುರಿತು ಆಕ್ರೋಶಗೊಂಡಿದ್ದು, ನನ್ನ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬೆಂಬಲಿಗರ ಕಡೆಯಿಂದ ಅಟ್ಯಾಕ್​ ಮಾಡಲು ಯತ್ನಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಕೊಲೆ ಬೆದರಿಕೆ ಹಾಕಿದ್ದಾರೆ. ಕೂಡಲೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಧರಣಿ ನಡೆಸಿದ್ದಾರೆ.

ಸಿಟಿ ರವಿ ಪ್ರತಿಕ್ರಿಯೆ ನೀಡಿ, ಇದಕ್ಕೆಲ್ಲ ಹೆದರಿಕೊಂಡು ರಾಜಕಾರಣ ಮಾಡುವವನಲ್ಲ. ಏಕಾಂಗಿಯಾಗಿಯೇ ಎಲ್ಲವನ್ನೂ ಎದುರಿಸುತ್ತೇನೆ. ನನ್ನ ಕೊಲೆ ಮಾಡುವುದಕ್ಕೆ ಸಂಚು ರೂಪಿಸಿಕೊಂಡು ಬಂದಿದ್ದಾರೆ. ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ. ಅಶ್ಲೀಲ ಪದಬಳಕೆ ಮಾಡಿದ್ದನ್ನ ತೋರಿಸಿ ಎಂದು ಸಿಟಿ ರವಿ ಸವಾಲ್ ಹಾಕಿದ್ದಾರೆ.

ಸುವರ್ಣಸೌಧದಲ್ಲೇ ಇಂತಹ ಸ್ಥಿತಿ ಇದೆ ಎಂದರೆ ಅರ್ಥಮಾಡಿಕೊಳ್ಳಿ. ಶಾಸಕನಿಗೆ ರಕ್ಷಣೆ ಇಲ್ಲ ಅಂದರೆ, ಜನಸಾಮಾನ್ಯರ ಸ್ಥಿತಿ ಹೇಗಿದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಬಾಣಂತಿಯರ ಸಾವು, ವಕ್ಫ್ ವಿಚಾರ ಡೈವರ್ಟ್ ಮಾಡಲು ಯತ್ನ ನಡೆದಿದೆ. ಸರ್ಕಾರದ ಕುಮ್ಮಕ್ಕಿನಿಂದಲೇ ನನ್ನ ಮೇಲೆ ದಾಳಿ ನಡೆದಿದೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರ ತರಾಟೆ-
ಸಿಟಿ ರವಿ ಮೇಲಿನ ಹಲ್ಲೆ ಯತ್ನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಎಡಿಜಿಪಿ ಹಿತೇಂದ್ರಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.
ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿಗರನ್ನ ಹೇಗೆ ಒಳ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರ ಆಕ್ರೋಶ ಕಂಡು ಡಿಜಿಪಿ ಹಿತೇಂದ್ರ ಅವರು ತಲೆ ಅಲ್ಲಾಡಿಸುತ್ತಾ ಸುಮ್ಮನೆ ನಿಂತುಕೊಂಡಿದ್ದರು ಎನ್ನಲಾಗಿದೆ.

ಭದ್ರತೆಗೆ ಹೆಚ್ಚುವರಿ ಪೊಲೀಸರು-
ಸುರ್ವಣ ಸೌಧದಲ್ಲಿ ನಡೆದಿದೆ ಎನ್ನಲಾದ ಗಲಾಟೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ
, ಸುವರ್ಣ ಸೌಧದ ಮುಂಭಾಗದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ಬಂದೋಬಸ್ತ್ ವೀಕ್ಷಣೆ ಮಾಡಿದರು.


ಸುವರ್ಣಸೌಧಕ್ಕೆ ದಿಗ್ಬಂಧನ-
ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ಬೆಂಬಲಿಗರು ಸುವರ್ಣಸೌಧದ ಕಾರಿಡಾರ್​ನಲ್ಲಿ ಸಿ.ವಿ.ರವಿ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಗಲಭೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಬಿಗಿ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಸುವರ್ಣಸೌಧದ ಎಲ್ಲ ಗೇಟ್​ಗಳನ್ನು ಬಂದ್ ಮಾಡಲಾಗಿದ್ದು
,ಎಲ್ಲಾ ಫ್ಲೋರ್​ಗೂ ಪೊಲೀಸ್​ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ನೊಂದಿದ್ದಾರೆ-
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿಯವರು ಬಳಸಿರುವ ಆಕ್ಷೇಪಾರ್ಹ ಪದದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ
, ಆ ಸಮಯದಲ್ಲಿ ತಾನು ಮೇಲ್ಮನೆಯಲ್ಲಿರಲಿಲ್ಲ, ಆದರೆ ಶಾಸಕರಿಂದ ವಿಷಯ ತಿಳಿಯಿತು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ತುಂಬಾ ನೊಂದುಕೊಂಡಿದ್ದಾರೆ. ಸಭಾಪತಿ ಮತ್ತು ಪೊಲೀಸರಿಗೂ ಅವರು ದೂರು ಸಲ್ಲಿಸಿದ್ದಾರೆ. ರವಿಯವರು ಬಳಸಿರುವ ಪದ ಕ್ರಿಮಿನಲ್ ಅಫೆನ್ಸ್ ಆಗಬಹುದಾಗಿದೆ ಎಂದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ