LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಕ್ಷಗಾನ ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 02:-ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (2022ರ ಜುಲೈ 01 ರಿಂದ 2022ರ ಡಿಸೆಂಬರ್ 31 ಹಾಗೂ 2023ರ ಜನವರಿ 01 ರಿಂದ 2023ರ ಡಿಸೆಂಬರ್ 31ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹರ್ಯನ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.

ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ ಜುಲೈ 25 ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಅಕಾಡೆಮಿಯಿಂದ (ದೂ:080-22113146) ಪಡೆಯಬಹುದು ಹಾಗೂ ಅರ್ಜಿಗಳನ್ನು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು