LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯರಬಳ್ಳಿ ಗೊಲ್ಲರಹಟ್ಟಿ: ಮೌಢ್ಯ ಪದ್ಧತಿ ಆಚರಣೆ ವಿರುದ್ಧ ಜಾಗೃತಿ



ಚಿತ್ರದುರ್ಗಜೂ.11:

ಜಿಲ್ಲೆಯ ಹಿರಿಯೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಯರಬಳ್ಳಿ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ಮೌಢ್ಯ ಪದ್ಧತಿ ಮತ್ತು ಆಚರಣೆ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜೆಂಡರ್ಸ್ ಸ್ಪೆಷಲಿಸ್ಟ್ ಡಿ. ಗೀತಾ ಅವರು ಮೌಢ್ಯ ಆಚರಣೆಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಅದರಿಂದ ಸಮಾಜದಲ್ಲಿ ನಡೆಯುತ್ತಿರುವ ಅನಿಷ್ಟ ಪದ್ಧತಿಗಳ ಬಗ್ಗೆ ಜಾಗೃತಿ ಮೂಡಿಸಿದರು.

ಊರಿನಲ್ಲಿ ಯಾವುದೇ ಹೆಣ್ಣು ಮಗಳು ಋತುಮತಿ ಆದರೆ ಮತ್ತು ಯಾವುದೇ ಮಹಿಳೆ ಹೆರಿಗೆಯಾದರೆ ಊರಿನ ಪದ್ದತಿಯ ಪ್ರಕಾರ ಆ ಮಹಿಳೆಯರು ಮನೆ ತೊರೆದು ಕುಟೀರಗಳಲ್ಲಿ ವಾಸ್ತವ್ಯ ಹೂಡುವುದು ವಾಡಿಕೆ ಆಗಿರುತ್ತದೆ. ಮುಂದಿನ ದಿನಗಳಲ್ಲಿ ಈ ತರ ತಪ್ಪುಗಳನ್ನು ಮತ್ತು ಕೆಟ್ಟ ಆಚರಣೆಗಳನ್ನು ಮಾಡದಂತೆ ಗ್ರಾಮದ ಮಹಿಳೆಯರಿಗೆ ಜಾಗೃತಿಯನ್ನು ಮೂಡಿಸಲಾಯಿತು. ಮುಂದಿನ ದಿನಗಳಲ್ಲಿ ಈ ತರಹ ಆಚರಣೆಗಳು ಕಂಡು ಬಂದಲ್ಲಿ ಮೇಲಾಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ಪೆÇಲೀಸ್ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗುವುದು ಎಂದು ತಿಳಿಸಲಾಯಿತು. ಈ ತರದ ಪದ್ಧತಿಗಳು ಈ ಹಟ್ಟಿಗಳಲ್ಲಿ ಹೆಚ್ಚಾಗಿ ಕಂಡುಬಂದಲ್ಲಿ ಮಾಹಿತಿ ತಿಳಿಸುವಂತೆ ಗ್ರಾಮದ ಮಹಿಳೆಯರಿಗೆ ಮಹಿಳಾ ಸಹಾಯವಾಣಿ ಸಂಖ್ಯೆ 181 ಮತ್ತು ಪೆÇಲೀಸ್ ಸಹಾಯವಾಣಿ 112 ಮುತ್ತು ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳ ನಡೆದಾಗ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡುವಂತೆ ತಿಳಿಸಲಾಯಿತು.

ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕರ ನಿಷೇಧ, ಬಾಲ ತಾಯಂದಿರು, ಫೆÇೀಕ್ಸೋ ಕಾಯಿದೆ, ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸೇರಿದಂತೆ ಸುರಕ್ಷಿತ ಸ್ಪರ್ಶ ಅಸುರಕ್ಷಿತ ಸ್ಪರ್ಶ, ಶಾಲೆಯನ್ನು ತೊರೆದರೆ ಆಗುವಂತಹ ಅನಾನುಕೂಲತೆಗಳು ಹಾಗೂ ತಮ್ಮ ತಮ್ಮ ಮನೆಯ ಮಕ್ಕಳಿಗೆ ಶಿಕ್ಷಣ ಕೊಡಿಸುವಂತೆ ಪೆÇೀಷಕರಿಗೆ ಶಿಕ್ಷಣದ ಮಹತ್ವ ಕುರಿತು ಸೂಕ್ಷ್ಮವಾಗಿ ತಿಳಿಸಿ ಹಾಗೂ ಮೌಢ್ಯ ಆಚರಣೆಗಳನ್ನು ಮಾಡದಂತೆ ಜಾಗೃತಿ ಯನ್ನು ಮೂಡಿಸಲಾಯಿತು.

ಗೊಲ್ಲರಹಟ್ಟಿಗಳಲ್ಲಿ ಮೌಢ್ಯ ಪದ್ಧತಿ ಮತ್ತು ಆಚರಣೆ ಮಾಡುವುದು ತೀರ ತಪ್ಪು ಹಾಗೂ ಈ ತರಹದ ಆಚರಣೆಗಳನ್ನು ಮಾಡಿದ್ದಲ್ಲಿ ಹೆಣ್ಣು ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗಿ ಹೋಗುತ್ತಾರೆ ಹಾಗೂ ಹೆಣ್ಣು ಮಕ್ಕಳು ಋತುಮತಿಯಾದ ಸಂದರ್ಭದಲ್ಲಿ ಮತ್ತು ಹೆರಿಗೆಯಾದ ಸಂದರ್ಭದಲ್ಲಿ ಅವರಿಗೆ ವೈಯಕ್ತಿಕ ಸ್ವಚ್ಛತೆ ಮತ್ತು ಬೆಚ್ಚನೆಯ ವಾತಾವರಣ ತುಂಬಾ ಮುಖ್ಯವಾಗಿರುತ್ತದೆ. ಅದರಂತೆ ಹಸುಗುಸಿಗೂ ಸಹ ಭದ್ರತೆ ತುಂಬಾ ಮುಖ್ಯವಾಗುತ್ತದೆ. ಬಾಣಂತಿ ಮಹಿಳೆಯರನ್ನು ದಯಮಾಡಿ ಮನೆಯಲ್ಲಿ ರಕ್ಷಣೆ ಮಾಡಿ ಎಂದು ಸಭಿಕರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಶಾಲೆಯ ಮುಖ್ಯ ಶಿಕ್ಷಕ ಕಣಮ್ಮಪ್ಪ, ಪ್ರಾಥಮಿಕ ಆರೋಗ್ಯ ಅಧಿಕಾರಿ ವರದರಾಜು, ಗ್ರಾಮಸ್ಥರಾದ ನಿಂಗಣ್ಣ, ಗಿಡ್ಡಪ್ಪ, ಅಂಗನವಾಡಿ ಮೇಲ್ವಿಚಾರಕಿ ಜಯಮಾಲಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಮಹಿಳೆಯರು, ಊರಿನ ಮುಖಂಡರು ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು