ಬಳ್ಳಾರಿ. ಅ. 12: : ಭಾರತೀಯ ಜನತಾ ಪಾರ್ಟಿಯ ಬಳ್ಳಾರಿ ಜಿಲ್ಲೆ ಅಲ್ಪ ಸಂಖ್ಯಾತರ ಮೋರ್ಚಾ “ಜಿಲ್ಲಾ ಉಪಾಧ್ಯಕ್ಷ”ರನ್ನಾಗಿ ಬಳ್ಳಾರಿ ತಾಲೂಕಿನ ಕೆ ವಿರಾಪುರ ಗ್ರಾಮದ ಚರ್ಮಸ್ವಲಿ ಡಿ ತಂದೆ ಕಾಸಿಂಸಾಬ್ ಇವರನ್ನು ನೇಮಕ ಮಾಡಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಬಿ. ಜೆ. ಪಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಲ್ಲಾಭಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಗೆ ನೀಡಿದ ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಪಕ್ಷ ನೀಡುವ ಎಲ್ಲಾ ಆದೇಶಗಳನ್ನು ಪಾಲಿಸಿ ಮುಂಬರುವ ಎಲ್ಲಾ ರೀತಿಯ ಚುನಾವಣೆಗಳನ್ನು ಎದುರಿಸಲು ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕೆಂದು ಈ ಸಂದರ್ಭದಲ್ಲಿ ಸೂಚಿಸಿದರು.
ಆದೇಶವನ್ನು ಸ್ವೀಕರಿಸಿದ ಸರ್ಮಸ್ ವಾಲಿ ಮಾತನಾಡಿ ಪಕ್ಷವು ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲಾ ಮಟ್ಟದ ಹುದ್ದೆಯನ್ನು ನೀಡಿದೆ ಪಕ್ಷದ ಎಲ್ಲಾ ಪದಾಧಿಕಾರಿಗಳಿಗೆ ಧನ್ಯವಾದಗಳು ತಿಳಿಸಲು ಇಚ್ಛಿಸುತ್ತೇನೆ ಮುಂದಿನ ದಿನಗಳಲ್ಲಿ ಅವರು ನೀಡುವ ಸೂಚನೆಯನ್ನು ಪಾಲಿಸುತ್ತಾ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟಿಸಿ ಪಕ್ಷ ನನ್ನ ಮೇಲಿಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ನಾಯ್ಡು ಮಾಜಿ ಸಂಸದ ಸಣ್ಣ ಪಕೀರಪ್ಪ ಸೇರಿದಂತೆ ಪಕ್ಷದ ವಿವಿಧ ಮಂಡಲಗಳ ಪದಾಧಿಕಾರಿಗಳು ಸದಸ್ಯರು ಇದ್ದರು.