Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬಜರಂಗದಳ ನಿಷೇಧ ಅಸಾಧ್ಯ: ಸಿಎಂ ಬೊಮ್ಮಾಯಿ








ಸುದ್ದಿಮೂಲ ವಾರ್ತೆ

ಹುಬ್ಬಳ್ಳಿ, ಮೇ 4: ಬಜರಂಗದಳ ನಿಷೇದಿಸಲು ಸಾಧ್ಯವಿಲ್ಲ. ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜರಂಗದಳ ಇಡೀ ದೇಶದಲ್ಲಿ ಇರುವ ಸಂಘಟನೆ. ಇವರಿಗೆ ದೇಶದಲ್ಲಿ ಅಧಿಕಾರವೇ ಇಲ್ಲ, ಅದನ್ನು ಹೇಗೆ ನಿಷೇಧಿಸಲು ಸಾಧ್ಯ? ಸಮಾಜದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಭಜರಂಗದಳ ನಿಷೇಧಿಸುವ ಬಗ್ಗೆ ಮಾತನಾಡಿದ್ದಾರೆ ಎಂದರು.

ಕಾಂಗ್ರೆಸ್ ಪ್ರಣಾಳಿಕೆ ಇದೊಂದು ಮೋಸದ ಪ್ರಣಾಳಿಕೆ. ಜನರನ್ನ ಮರಳು ಮಾಡುವ ಪ್ರಣಾಳಿಕೆ. ಜನರು ಇದನ್ನು ಧಿಕ್ಕರಿಸಲಿದ್ದಾರೆ. ಕಾಂಗ್ರೆಸ್‌ನವರು ನಾವು ಈಗಾಗಲೇ ಮಾಡಿದ ಕೆಲಸಗಳನ್ನೇ ತಾವು ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬರೀ ಸುಳ್ಳು ಹೇಳಿದ್ದಾರೆ. ಈ ಪ್ರಣಾಳಿಕೆ ಅನುಷ್ಠಾನ ಮಾಡಲು 6 ಲಕ್ಷ ಕೋಟಿ ಅನುದಾನ ಬೇಕು ಎಂದರು.

ಈಗಾಗಲೇ ಬಿಜೆಪಿ ಜಾರಿಗೆ ತಂದ ಯೋಜನೆಗಳನ್ನು, ಪುನಃ ಜಾರಿ ಮಾಡುವುದಾಗಿ ಹೇಳಿದ್ದಾರೆ. ಈಗಾಗಲೇ ಜಲಜೀವನ ಮಿಷನ್ ಮೂಲಕ ಮನೆ ಮನೆಗೆ ನಲ್ಲಿ ನೀರು ಕೊಡುವ ಕೆಲಸ ಆರಂಭಿಸಲಾಗಿದೆ. ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ನಾವು ಈಗಾಗಲೇ ಬಜೆಟ್ ನಲ್ಲಿ ಘೋಷಣೆ ಮಾಡಿದ್ದೇವೆ. ಮೀಸಲಾತಿ ಪ್ರಮಾಣ ಶೇಕಡ 75% ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಹೇಗೆ ಮಾಡುತ್ತಾರೆ? ಕೇಂದ್ರದಲ್ಲಿ ಇವರ ಸರ್ಕಾರ ಇದೆಯಾ? ಹಿಂದುಳಿದ ಜನಾಂಗ ನಿಗಮಗಳನ್ನು ಸ್ಥಾಪಿಸುವುದಾಗಿ ಹೇಳಿದೆ. ನಾನು ಈಗಾಗಲೇ ಘೋಷಣೆ ಮಾಡಿ, ಅದೇಶ ಮಾಡಿದ್ದೇನೆ. ಕಾಂಗ್ರೆಸ್ ಅದನ್ನೇ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಸಿಎಂ ಬೊಮ್ಮಾಯಿ ವ್ಯಂಗವಾಡಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ