ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ನರ್ಮದಾ ಎಂಬ ಮಹಿಳೆ ಮೃತಪಟ್ಟ ಘಟನೆ ಆತಂಕಕ್ಕೆ ಕಾರಣವಾಗಿದೆ. ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಸಣ್ಣ ಕರಳಿಗೆ ಹಾನಿ ಮಾಡಿದ್ದರಿಂದ ಸೋಂಕು ಉಂಟಾಗಿ ಸಾವಿಗೆ ಕಾರಣವಾಯಿತು ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ವೈದ್ಯಕೀಯ ನಿರ್ಲಕ್ಷ್ಯ ನಡೆದಿದೆ ಎಂದು ಆರೋಪಿಸಿ ಸಂಬಂಧಿಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ಆಸ್ಪತ್ರೆ ಎದುರು ಧರಣಿ ನಡೆಸಿ ನ್ಯಾಯಕ್ಕೆ ಆಗ್ರಹಿಸಿದ್ದಾರೆ. ಈ ಘಟನೆ ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ವ್ಯವಸ್ಥೆ ಹಾಗೂ ವೈದ್ಯಕೀಯ ಹೊಣೆಗಾರಿಕೆ ಬಗ್ಗೆ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ.