LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೂಟಿಗೆ 7 ದಾರಿ ಹುಡುಕುತ್ತಿರುವ ಬೆಂಗಳೂರು ಘಜ್ನಿ, ಘೋರಿ!

ಬೆಂಗಳೂರು: ಬಿಬಿಎಂಪಿಯನ್ನು ಏಳು ಭಾಗ ಮಾಡುವುದಕ್ಕೆ ಹೊರೆಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.

ಸಂಪದ್ಭರಿತ ಬೆಂಗಳೂರು ನಗರವನ್ನು ಲೂಟಿ ಮಾಡಲು ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಅವನು ನಗರದ ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ!! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬಿಬಿಎಂಪಿಯನ್ನು ಛಿದ್ರ ಮಾಡುವ ಸರಕಾರದ ನಡೆಯನ್ನು ಕಟುವಾದ ಶಬ್ದಗಳಲ್ಲಿ ಟೀಕಿಸಿದ್ದಾರೆ.ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ!! 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ.

ಕಾಂಗ್ರೆಸ್ ನೀತಿಯೇ Divide and Rule (ಒಡೆದು ಅಳುವುದು). ಅಂದು ಅಖಂಡ ಭಾರತವನ್ನು ಹೋಳು ಮಾಡಿತು! ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾಡಪ್ರಭು ಕೆಂಪೇಗೌಡರ ಪರಂಪರೆಯನ್ನು ಬೇರುಸಹಿತ ಹಾಳು ಮಾಡುವುದೇ ಕಾಂಗ್ರೆಸ್ ಸರಕಾರದ ದುರಿದ್ದೇಶವಾಗಿದೆ. ಇವರಿಗೆ ಗ್ರೇಟರ್‌ ಬೆಂಗಳೂರು ಎನ್ನುವುದು ಹೆಸರಿಗಷ್ಟೇ. ಲೂಟರ್‌ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ ಎಂದಿರುವ ಅವರು ಲೂಟರ್ ಯಾರು ಎಂಬುದನ್ನು ಹೇಳಿಲ್ಲ, ಅದಕ್ಕೆ ಅವರು ಯಾರ ಹೆಸರನ್ನೂ ತೆಗೆದುಕೊಂಡಿಲ್ಲ.

ಬಿಬಿಎಂಪಿ ವಿಭಜನೆ ಅಧಿಕಾರ, ಅಭಿವೃದ್ಧಿ ವಿಕೇಂದ್ರೀಕರಣವಲ್ಲ, ಇದು ಲೂಟಿಯ ವಿಕೇಂದ್ರೀಕರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು; ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್‌ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದಿದ್ದಾರೆ.

ಅಲ್ಲದೆ, ಏಳು ಪಾಲಿಕೆ ಹಾಳು ಪಾಲಿಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ