Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಪಘಾತದ ರಸ್ತೆಯಾಗಿ ಮಾರ್ಪಟ್ಟ ಬೆಂಗಳೂರು-ಮೈಸೂರು ಎಕ್ಷ್‌ಪ್ರೆಸ್‌ ರೋಡ್‌

ಸುದ್ದಿಮೂಲ ವಾರ್ತೆ



ಮೈಸೂರು, ಜೂನ್‌ 8 :  ಬೆಂಗಳೂರು ಮತ್ತು ಮೈಸೂರು ನಗರಗಳು ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಗದಷ್ಟು

ಬೆಳೆಯಲಿ ಮತ್ತು ಜನರ ಪ್ರಯಾಣದ ಅವಧಿ ಇಳಿಮುಖವಾಗಬೇಕು ಎಂಬ ಉದ್ದೇಶದಿಂದ 9 ಸಾವಿರ ಕೋಟಿ ರೂಪಾಯಿ


ವೆಚ್ಚದಲ್ಲಿ ಬೆಂಗಳೂರು ಮತ್ತು ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗಿದೆ.. ಆದರೆ ಈ ರಸ್ತೆ ಈಗ


ಅಪಘಾತದ ರಸ್ತೆಯಾಗಿ ಮಾರ್ಪಡಾಗಿದೆ.


ಆರು ತಿಂಗಳಲ್ಲಿ 55 ಸಾವು

2023ರ ಜನವರಿ ತಿಂಗಳಿಂದ ಮೇ ತಿಂಗಳ ಅಂತ್ಯದ ವರೆಗೆ 570 ಅಪಘಾತ ಪ್ರಕರಣಗಳು ನಡೆದಿವೆ. ಅದರಲ್ಲಿ 55 ಮಂದಿ


ಮೃತಪಟ್ಟಿದ್ದರೇ, 52 ಮಂದಿಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನು 184 ಮಂದಿಗೆ ಕೈ-ಕಾಲು ಮುರಿದಿದ್ದು, 279 ಜನರಿಗೆ


ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರ ಅಂಕಿ ಅಂಶಗಳಿಂದ ತಿಳಿದು ಬಂದಿದೆ.


ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿವೆ ಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಈ ಹೈವೇ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿಯೇ ಹೆಚ್ಚು


ಹಾದು ಹೋಗಿದೆ. ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದಾಗಿದೆ. ಸದ್ಯ ದಶಪಥ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಗಿದಿದ್ದು, ವಾಹನ ಸವಾರರು ಖುಷಿಯಿಂದ ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣ ಹಾಗೂ ಅದರಿಂದ ಮೃತಪಟ್ಟವರ ಸಂಖ್ಯೆ  ಭಯಹುಟ್ಟಿಸದೇ ಇರದು.


ಅತಿಯಾದ ವೇಗ

ಎಕ್ಸ್ ಪ್ರೆಸ್ ವೇ ಸೇರಿದಂತೆ ಸರ್ವಿಸ್ ರಸ್ತೆಯಲ್ಲಿಯೂ  ವೇಗವಾಗಿ ವಾಹನಗಳು ಬರುತ್ತಿರುವ ಕಾರಣ


ನಿಯಂತ್ರಿಸಲಾಗದೇ ಅಪಘಾತ ನಡೆಯುತ್ತಿದೆ. ಇನ್ನೊಂದೆಡೆ ಅವೈಜ್ಞಾನಿಕವಾಗಿ ಕಾಮಗಾರಿಯು ಕಾರಣ ಎಂಬ ಅಸಮಾಧಾನದ ಮಾತುಗಳು ಕೇಳಿಬರುತ್ತಿವೆ. ಮತ್ತೊಂದೆಡೆ ಸರ್ವಿಸ್ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ದಿಬ್ಬ ನಿರ್ಮಾಣ ವಾಗಿದ್ದು, ಅಲ್ಲಿಯೂ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದೆ. ಇನ್ನು ಹಲವು ಕಾರಣಗಳಿಂದ ಅಪಘಾತ ದಿನೇ ದಿನೇ ಹೆಚ್ಚಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದರೂ ಅಪಾಯ ತಪ್ಪಿದಲ್ಲ.. ಅಪಘಾತದಿಂದ ಪಾರಾಗಲು ವಾಹನಗಳನ್ನು ಚಾಲನೆ ಮಾಡುವವರು ತಮ್ಮ ವಾಹನಗಳನ್ನು ನಿಧಾನವಾಗಿ ಚಾಲನೆ ಮಾಡಬೇಕು.




 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ