LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ನಗರ ಕ್ರಿಯಾಶೀಲತೆ, ಸ್ವಯಂ ಸೇವಾ ಚಟುವಟಿಕೆ, ಪರ್ಯಾಯ ಶಿಕ್ಷಣದ ಕೇಂದ್ರವಾಗಿದೆ: ಉಮಾ ಮಹಾದೇವನ್

ಬೆಂಗಳೂರು: ನಾಗರಿಕರ ಪಾಲ್ಗೊಳ್ಳುವಿಕೆ, ಸ್ವಯಂಸೇವಾ ಚಟುವಟಿಕೆ ಹಾಗೂ ಪರ್ಯಾಯ ಶಿಕ್ಷಣದ ಕೇಂದ್ರ ಬೆಂಗಳೂರು ನಗರವಾಗಿದೆ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ರವರು ತಿಳಿಸಿದರು.

ಪಾಲಿಕೆಯ ಹವಾಮಾನ ಕ್ರಿಯಾ ಕೋಶದ ವತಿಯಿಂದ ಐ.ಎ.ಎಸ್ ಅಧಿಕಾರಿಗಳ ಸಂಘದಲ್ಲಿ ಏರ್ಪಡಿಸಿದ್ದ ಲೇಖನಾ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೃಜನಾತ್ಮಕ ಶಕ್ತಿಯನ್ನು ಬಳಸಿಕೊಂಡು ಹವಾಮಾನ ಬದಲಾವಣೆಗೆ ಸಂಬಂಧಿತ ವಿಶ್ಲೇಷಿತ ವಿವರಗಳನ್ನೊಳಗೊಂಡ ಕ್ರಿಯಾ ಯೋಜನೆಯನ್ನು ರಚಿಸುವುದು ಅಗತ್ಯವಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಡಳಿತಗಾರರದ ತುಷಾರ್ ಗಿರಿ ನಾಥ್* ರವರು ಮಾತನಾಡಿ, ಬೆಂಗಳೂರು ಹವಾಮಾನ ಬದಲಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ಹವಾಮಾನ ಕ್ರಿಯಾ ಯೋಜನೆಯನ್ನು ಪ್ರಕಟಿಸಲಾಗಿದ್ದು, ಅನೇಕ ಇಲಾಖೆಗಳು ಈ ಕ್ರಮಗಳನ್ನು ಅನುಷ್ಠಾನಗೊಳಿಸಬೇಕಾಗಿದೆ ಎಂದು ಹೇಳಿದರು.

ನಾಗರೀಕರೆ ನಗರದ ಶಕ್ತಿಯಾಗಿದ್ದು, ನಾವೆಲ್ಲಾ ಒಟ್ಟಾಗಿ ಸೇರಿ ನಗರದಲ್ಲಿ ಹವಾಮಾನ‌ ಬದಲಾವಣೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದು ತಿಳಿಸಿದರು.

ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ಅಧ್ಯಕ್ಷೆಯಾದ ಪ್ರೀತಿ ಗೆಹ್ಲೋಟ್ ರವರು ಮಾತನಾಡಿ, ಹವಾಮಾನ ವೈಪರಿತ್ಯ ನಿರ್ವಹಣೆ ಸಂಬಂಧಿಸಿದ ಚಟುವಟಿಕೆಗಳಿಗೆ ಸರ್ಕಾರಿ ಇಲಾಖೆಗಳು, ಹಿರಿಯ ಅಧಿಕಾರಿಗಳ ಜೊತೆಗೆ ಸರ್ಕಾರೇತರರಿಂದಲೂ ಸಹಕಾರ ಅಗತ್ಯವಿದೆ ಎಂದರು.ಹವಾಮಾನ‌ ಕ್ರಿಯಾ ಕೋಶದೊಂದಿಗೆ ಜವಾಬ್ದಾರಿ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸಹಕಾರಯುತ ವಾತಾವರಣವನ್ನು ನಿರ್ಮಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಸರ್ಕಾರದ ಜೊತೆ ನಾಗರಿಕರು ಕೈ ಜೋಡಿಸಿ ಏಕಮತವಾಗಿ ಕಾರ್ಯನಿರ್ವಹಿಸಿದರೆ, ನಮ್ಮ ಪ್ರಯತ್ನಗಳು ಪರಿಣಾಮಕಾರಿ ಕೊಡುಗೆಗಳನ್ನು ನೀಡಲು ಸಾಧ್ಯವಾಗುತ್ತದೆ. ಒಂದೇ ದೃಷ್ಟಿಕೋನದ ಮೇಲೆ, ಇರುವ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಕಾರ್ಯಗತ ಮಾಡಿದಾಗ ಫಲಿತಾಂಶಗಳು ಹೆಚ್ಚು ಪರಿಣಾಮಕಾರಿ ಆಗಿರುತ್ತದೆಂದು ತಿಳಿಸಿದರು.

ಈ ಕಾರ್ಯಾಗಾರದಲ್ಲಿ 40ಕ್ಕೂ ಹೆಚ್ಚು ಸಲಹೆಗಾರರು ಭಾಗವಹಿಸಿ, ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದರು.

ಈ ವೇಳೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಪ್ರಭಾಶ್ ಚಂದ್ರ ರೇ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಶಿವಶಂಕರ್, ಯೋಜನೆ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ