LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಬ್ಬಕ್ಕೆ ‘DJ’ ನಿಷೇಧಿಸಿ ಆದೇಶ!

ಬೆಂಗಳೂರು: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ದಿನಾಂಕ 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹೀಗಾಗಿ ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ, ಅತಿಸೂಕ್ಷ್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.

ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್‌ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026