E-PAPER
16 Nov 2026, 02:19:34 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಹಾಸಭೆಯಿಂದ ಬಸವ ಜಯಂತಿ ವಿವಿಧ ಕಾರ್ಯಕ್ರಮಗಳು

ಬೆಳಗಾವಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಾಗೂ ಬಸವ ಜಯಂತಿ ಉತ್ಸವ ಸಮಿತಿಯು, ಬಸವ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಮಹಾನಗರದಲ್ಲಿ ಹಮ್ಮಿಕೊಂಡಿದೆ.
ದಿನಾಂಕ 17. 4. 2026ರಂದು ಮುಂಜಾನೆ 8.30 ಗಂಟೆಗೆ ಗೋವಾ ಸರ್ಕಲ್ಲಿನ ಬಸವೇಶ್ವರ ಉದ್ಯಾನವನದಲ್ಲಿ ಷಟಸ್ಥಳ ಧ್ವಜಾರೋಹಣ ಹಾಗೂ ಬಸವಣ್ಣನವರ ಪ್ರತಿಮೆಗೆ ಪೂಜೆ ನೆರವೇರಲಿದ್ದು ಸಾನಿಧ್ಯವನ್ನು ಕಾರಂಜಿಮಠದ ಪೂಜ್ಯ ಗುರುಸಿದ್ಧ ಮಹಾಸ್ವಾಮಿಜಿಯವರು ವಹಿಸಲಿದ್ದಾರೆ. ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಶಟಸ್ಥಳ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷರಾದ ರತ್ನಪ್ರಭಾ ಬೆಲ್ಲದ ಉಪಸ್ಥಿತರಿರುವರು.
ಅಂದು ಸಂಜೆ 4:30 ಗಂಟೆಗೆ ಅಮಾವಾಸ್ಯೆ ಅನುಭಾವ ಗೋಷ್ಠಿ ಶಿವ ಬಸವ ನಗರದ ಲಿಂಗಾಯತ ಭವನದಲ್ಲಿ ಜರುಗಲಿದ್ದು ಬೆಳಗಾವಿಯ ಪ್ರಾದೇಶಿಕ ಆಯುಕ್ತ ಜಾನಕಿ ಕೆ.ಎಂ. ಉಪನ್ಯಾಸ ನೀಡಲಿದ್ದಾರೆ. ಅಂದು ಬಸವ ಜಯಂತಿ ಅಂಗವಾಗಿ ಜರುಗಿದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ಹಾಗೂ ಪಾರಿತೋಷಕ ವಿತರಿಸಲಾಗುವುದು.
18. 4. 2026ರಂದು ಶಿವಬಸವ ನಗರದ ಲಿಂಗಾಯತ ಭವನದಲ್ಲಿ 4.30ಕ್ಕೆ ಮಹಿಳಾ ಗೋಷ್ಠಿ ಜರುಗಲಿದ್ದು ಡಾ. ವೀಣಾ ಯಲಿಗಾರ 'ಶಿವಶರಣೆಯರು ಕಂಡ ಬಸವಣ್ಣ' ವಿಷಯ ಕುರಿತು ಮಾತನಾಡಲಿದ್ದಾರೆ. ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.
19.4.2026ರಂದು ಮುಂಜಾನೆ 8.30ಕ್ಕೆ ಗಂಟೆಗೆ ಚೆನ್ನಮ್ಮ ವೃತ್ತದಿಂದ ಬಸವ ಜಯಂತಿ ನಿಮಿತ್ತವಾಗಿ ಬೈಕ್ ರ್ಯಾಲಿ ಜರುಗಲಿದೆ.
26. 4. 2026 ರಂದು ಬಸವ ಜಯಂತಿಯ ಅಂಗವಾಗಿ ಮಹಾಸಭೆ ಹಾಗೂ ವಿವಿಧ ಲಿಂಗಾಯತ ಸಂಘಟನೆಗಳ ಸಂಯುಕ್ತಾ ಆಶ್ರಯದಲ್ಲಿ ಬೃಹತ್ ಮೆರವಣಿಗೆ ಚೆನ್ನಮ್ಮ ವೃತ್ತದಿಂದ ಸಂಜೆ 4 ಗಂಟೆಗೆ ಜರುಗಲಿದೆ. ಜಿಲ್ಲೆಯ ಶಾಸಕರು ಸಂಸದರು ಹಾಗೂ ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಈ ಕುರಿತು ರತ್ನಪ್ರಭಾ ಬೆಲ್ಲದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ ಜಿನದತ್ತ ದೇಸಾಯಿಯವರ ಬದುಕು ಬರಹ ನಮಗೆಲ್ಲ ಮಾದರಿ- ಪ್ರಾ ಬಿ ಎಸ್ ಗವಿಮಠ CCEA ಮತ್ತು ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿಅಂಜುಮನ್ ಪದವಿ ಕಾಲೇಜಿಗೆ ಚಾಂಪಿಯನಶಿಪ್‌ ಪ್ರಶಸ್ತಿಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ , ಮಾಜಿ ಸಚಿವ, ಶಿವಾನಂದ ಕೌಜಲಗಿ ಲಿಂಗೈಕ್ಯರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerರಾಜಾ ಲಖಮಗೌಡರು, ಶಿರಸಂಗಿ ಲಿಂಗರಾಜರು ಮತ್ತು  ಪಾಟೀಲ ಪುಟ್ಟಪ್ಪ ಭಾವ ಚಿತ್ರಗಳನ್ನು ಆಹ್ವಾನ ಪತ್ರಿಕೆಗಳಲ್ಲಿ ಮುದ್ರಿಸಬೇಕು ; ಡಾ.ಸರಜೂ ಕಾಟ್ಕರಭ್ರಷ್ಟಾಚಾರ ರಹಿತ ಸಮ ಸಮಾಜ ನಿರ್ಮಾಣ ಶರಣರ ತತ್ವಗಳಿಂದ ಮಾತ್ರ ಸಾಧ್ಯ ; ಡಾ.ಬಸವರಾಜ ಹುಲಮನಿನಿಯಮ ಉಲ್ಲಂಘಿಸುವ ಹೋಟೆಲ್, ಪಬ್, ಡಾಬಾಗಳ ವಿರುದ್ಧ ಕಠಿಣ ಕ್ರಮ: ಪೊಲೀಸ್ ಕಮಿಷನರ್ ನಿಕ್ಕಂ ಎಚ್ಚರಿಕೆಜೆಎಲ್ಎಂ ಕಚೇರಿಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ