LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಾಲತಾಣಗಳ ಅತಿರೇಕ: ಬೇಸತ್ತ ಜನ ಮತ್ತೆ ರಂಗಭೂಮಿಯತ್ತ.! ಬಸವಪ್ರಭು ಸ್ವಾಮೀಜಿ

 

ಚಿತ್ರದುರ್ಗ: ಆರೋಗ್ಯಕರ ಬೆಳವಣಿಗೆಗೆ ರಂಗಭೂಮಿ ಅಗತ್ಯವಾಗಿದೆ. ಜಾಲತಾಣಗಳ ಅತಿರೇಕಗಳಿಗೆ ಬೇಸತ್ತ ಜನ ಮತ್ತೆ ರಂಗಭೂಮಿಯತ್ತ ವಾಲುತ್ತಿರುವುದು ಸಂತಸ ತಂದಿದೆ. ಸಾಂಸಾರಿಕ ಸಹಬಾಳ್ವೆಗೆ ಹಾಗೂ ಉತ್ತಮ ಬಾಂಧವ್ಯಕ್ಕೆ ರಂಗಭೂಮಿ ಸಹಕಾರಿಯಾಗಿದೆ ಎಂದು ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪಿಳ್ಳೆಕೆರೇನಹಳ್ಳಿಯ ಬಾಪೂಜಿ ವಿದ್ಯಾಸಂಸ್ಥೆಯ ಆವರಣದಲ್ಲಿ ಮಂಗಳವಾರ ಸಂಜೆ ೬ ಗಂಟೆಗೆ ಕನ್ನಡ ರಾಜ್ಯೋತ್ಸವ, ಮಕ್ಕಳ ಕಲರವ ಮತ್ತು ಶಿವಸಂಚಾರ ನಾಟಕೋತ್ಸವ ೨೦೨೪ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಮಾತನಾಡಿದರು.

ಒಂದು ನಾಟಕ ವೀಕ್ಷಿಸಿದರೆ ಹಲವು ಪುಸ್ತಕಗಳನ್ನು ಓದಿದ ಅನುಭವವಾಗುತ್ತದೆ. ನಾಟಕ ನೋಡುವ ಮನಸ್ಸುಗಳು ಹೆಚ್ಚಾಗಬೇಕು. ಉತ್ತಮ ಜೀವನಕ್ರಮವನ್ನು ಕಲ್ಪಿಸುವ ರಂಗಭೂಮಿಯನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಾಟಕೋತ್ಸವಕ್ಕೆ ಪಾಶ್ಚಾತ್ಯ ಸಂಗೀತವಾದ್ಯ ಜಂಬೆ ನುಡಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಭವಿಷ್ಯದ ಪೀಳಿಗೆಗೆ ಸಾಹಿತ್ಯ, ಸಾಂಸ್ಕೃತಿಕ ಮತ್ತು ನಾಟಕಗಳ ಅಭಿರುಚಿ ಬೆಳೆಸಬೇಕಿದೆ. ಪ್ರೇಕ್ಷಕರು ನಾಟಕಗಳಲ್ಲಿ ಬರುವ ಪಾತ್ರಗಳೊಂದಿಗೆ ಸಮ್ಮಿಳನಗೊಂಡು ಅದರಿಂದ ಜೀವನಮೌಲ್ಯಗಳನ್ನು ತಮ್ಮದಾಗಿಸಿಕೊಳ್ಳಬೇಕು. ಆಗ ಮಾತ್ರ ನಾಟಕಗಳಲ್ಲಿ ಬರುವ ವಿಷಯವಸ್ತುವನ್ನು ಗ್ರಹಿಸಲು ಸಾಧ್ಯವಾಗುತ್ತದೆ. ನಾಟಕಗಳು ಪ್ರತಿಯೊಬ್ಬರ ಆಂತರಿಕ ಮನೋಧರ್ಮಗಳನ್ನು ಗಟ್ಟಿಗೊಳಿಸುತ್ತವೆ ಎಂದರು.

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆಎಮ್ ವೀರೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ಚಿತ್ರದುರ್ಗ ನಗರದಲ್ಲಿ ಶಿವಸಂಚಾರ, ನೀನಾಸಂ ಹಾಗೂ ಹವ್ಯಾಸಿ ರಂಗಕರ್ಮಿಗಳ ನಾಟಕಗಳು ನಿರಂತರವಾಗಿ ನಾಟಕಗಳನ್ನು ಪ್ರದರ್ಶಿಸುತ್ತಿವೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಂಗ ಕಲಾವಿದರಿಗೆ ಮತ್ತಷ್ಟು ಉತ್ತೇಜನ ಮತ್ತು ಪ್ರೋತ್ಸಾಹ ನೀಡಬೇಕು. ನಾಟಕ, ಕಲೆ, ಸಾಹಿತ್ಯ ಅಭಿರುಚಿಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ನಾಟಕಕಾರ ಮತ್ತು ಆರ್ಥಿಕತಜ್ಞ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಬಾಪೂಜಿ ಸಮೂಹ ಸಂಸ್ಥೆಯ ನಿರ್ದೇಶಕ ಕೆಎಮ್ ಚೇತನ್, ಶಸಾಪ ತಾಲ್ಲೂಕಧ್ಯಕ್ಷ ಷಡಾಕ್ಷರಯ್ಯ, ರಂಗನಿರ್ದೇಶಕ ಕೆಪಿಎಮ್ ಗಣೇಶಯ್ಯ, ಕದಳಿ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ಪ್ರೊ.ಎಂ.ಆರ್. ಜಯಲಕ್ಷಿö್ಮ, ಪ್ರ.ಕಾರ್ಯದರ್ಶಿ ಶೋಭಾ ಮಲ್ಲಿಕಾರ್ಜುನ್, ಸ.ಕಾರ್ಯದರ್ಶಿ ಶೈಲಜಾಬಾಬು, ಗ್ರಾ.ಪಂ ಸದಸ್ಯೆ ಜ್ಯೋತಿ ದೇವೇಂದ್ರಪ್ಪ ಉಪಸ್ಥಿತರಿದ್ದರು.

ದಾವಣಗೆರೆಯ ಸಂಗೀತ ವಿದ್ವಾನ್ ಆನಂದಕುಮಾರ್ ಪಾಟೀಲ್ ಹಿಂದೂಸ್ತಾನಿ ಸಂಗೀತಗಾಯನ ಪ್ರಸ್ತುತಪಡಿಸಿದರು. ನಾಟಕಕಾರ ಬಿ.ಆರ್.ಪೊಲೀಸ್ ಪಾಟೀಲ್ ವಿರಚಿತ ನಾಟಕ ತುಲಾಭಾರ ವಿಶ್ವೇಶ್ವರೀ ಹಿರೇಮಠ ನಿರ್ದೇಶನದಲ್ಲಿ ಸಾಣೇಹಳ್ಳಿ ಶಿವಸಂಚಾರದ ಕಲಾವಿದರು ಮನೋಜ್ಞವಾಗಿ ಅಭಿನಯಿಸಿದರು.

ಚಿತ್ರದುರ್ಗ ಜಿಲ್ಲೆಯ ನಾಗರಿಕರು, ರಂಗಾಸಕ್ತರು, ಜಿಲ್ಲಾಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು, ಉಪನ್ಯಾಸಕರು, ಕಲಾವಿದರು, ಸಾಹಿತಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಜನ ನಾಟಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025