Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಗೌರವ ಡಾಕ್ಟರೇಟ್‌ ತಿರಸ್ಕರಿಸಿದ Basavaraj Bommai – ಸಾರ್ವಜನಿಕ ಸೇವೆಯೇ ನನಗೆ ಪ್ರಶಸ್ತಿ

ಗೌರವ ಡಾಕ್ಟರೇಟ್ ಎಂದರೆ ವಿಶ್ವವಿದ್ಯಾನಿಲಯ ಅಥವಾ ಕಾಲೇಜು ನೀಡುವ ಪ್ರತಿಷ್ಠಿತ ಶೈಕ್ಷಣಿಕ ಗೌರವವಾಗಿದ್ದು, ನಿರ್ದಿಷ್ಟ ಕ್ಷೇತ್ರ, ಸಮಾಜ ಅಥವಾ ಮಾನವೀಯ ಸೇವೆಯಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಪ್ರದಾನ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ Basavaraj Bommai ಅವರಿಗೆ Haveri University ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ, ಬೊಮ್ಮಾಯಿ ಅವರು ಅದನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ.

ಹಾವೇರಿ, (ಏಪ್ರಿಲ್ 05): ಹಾವೇರಿ ವಿಶ್ವವಿದ್ಯಾಲಯವು ತಮಗೆ ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಅನ್ನು ಬಸವರಾಜ ಬೊಮ್ಮಾಯಿ ಅವರು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿದ ಅವರು, ಸಾರ್ವಜನಿಕ ಸೇವೆಯಲ್ಲಿ ಇರುವ ತಮಗೆ ಜನರ ವಿಶ್ವಾಸ ಮತ್ತು ಪ್ರೀತಿಯೇ ಅತಿ ದೊಡ್ಡ ಪ್ರಶಸ್ತಿಯಾಗಿದೆ ಎಂದು ಹೇಳಿದ್ದಾರೆ.

ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಮತ್ತು ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಬೊಮ್ಮಾಯಿ ಪ್ರಕಟಣೆಯಲ್ಲಿರುವ ಅಂಶಗಳು:

ಈ ಕುರಿತು ಪ್ರಕಟಣೆ ನೀಡಿರುವ ಅವರು, “ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ವಿಶ್ವವಿದ್ಯಾಲಯದ ಎಲ್ಲ ಅಧಿಕಾರಿಗಳಿಗೆ ಧನ್ಯವಾದಗಳು. ನಾನು ಈ ಗೌರವವನ್ನು ಸ್ವೀಕರಿಸುವುದಿಲ್ಲವೆಂದು ಈಗಾಗಲೇ ತಿಳಿಸಿದ್ದೇನೆ. ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ವ್ಯಕ್ತಿಯಾಗಿ, ಯಾವುದೇ ಪ್ರಶಸ್ತಿಯನ್ನು ನಿರೀಕ್ಷಿಸುವುದಿಲ್ಲ. ಜನರ ಪ್ರೀತಿ ಮತ್ತು ನಂಬಿಕೆಯೇ ನನಗೆ ಅತ್ಯಂತ ದೊಡ್ಡ ಗೌರವ” ಎಂದು ಹೇಳಿದ್ದಾರೆ.

“ಗೌರವ ಡಾಕ್ಟರೇಟ್ ಅನ್ನು ದೀರ್ಘಕಾಲದಿಂದ ವಿಶಿಷ್ಟ ಸಾಧನೆ ಮಾಡಿದವರಿಗೆ ನೀಡಬೇಕು ಎಂಬುದು ನನ್ನ ನಿಲುವು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಿತ ಸಮಾಜ ಸೇವಕರಿಗೆ ಈ ಗೌರವ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಚಾರದಲ್ಲಿ ಮರುಪರಿಶೀಲನೆ ಮಾಡಬೇಕೆಂದು ಮನವಿ ಮಾಡುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ, ಈ ಗೌರವಕ್ಕೆ ಆಯ್ಕೆ ಮಾಡಿದ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಅವರು ಮತ್ತೊಮ್ಮೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ