Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಂಪೂರ್ಣ ಬಹುಮತ ಪಡೆಯುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಮೈಸೂರು,ಏ.17: ರಾಜ್ಯದಲ್ಲಿ 130 ಸ್ಥಾನಗಳನ್ನು ಗೆದ್ದು ಸಂಪೂರ್ಣ ಬಹುಮತ ಪಡೆಯುವ ವಿಶ್ವಾಸವಿದೆ. ನಮ್ಮದು ಸಮುದಾಯ ಆಧಾರಿತ ಹಾಗೂ ಕಾರ್ಯಕರ್ತರ ದೊಡ್ಡ ಪಡೆ ಇರುವ ಪಕ್ಷ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ನಂಜನಗೂಡಿಗೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕೆಲವು ನಾಯಕರು ಪಕ್ಷದಿಂದ ಹೋಗಿದ್ದರೂ ನಮ್ಮದು ಇತರೆ ಪಕ್ಷಗಳಂತೆ ನಾಯಕ ಆಧಾರಿತ ಪಕ್ಷ ಅಲ್ಲ. ಆದ್ದರಿಂದ ಈ ರೀತಿಯ ಪಕ್ಷಾಂತರ ಯಾವುದೇ ರೀತಿಯ ಪರಿಣಾಮ ಬೀರಲ್ಲ. ಕಾಂಗ್ರೆಸ್ ಅವರಿಗೆ ಸುಮಾರು 60 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳೇ ಇರಲಿಲ್ಲ. ಹಾಗಾಗಿ ಅವರು ಪೂರ್ಣ ಪಟ್ಟಿ ಬಿಡುಗಡೆ ಮಾಡದೇ ವೀರಾವೇಶದಲ್ಲಿ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರು. ಬಿಜೆಪಿ ಬಲಿಷ್ಠ ಇರುವ ಕಡೆಗಳಲ್ಲಿ ಪಕ್ಷಾಂತರ ಮಾಡಿಸಿ ಟಿಕೆಟ್ ಕೊಟ್ಟರೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಜಗದೀಶ್ ಶೆಟ್ಟರ್ ಅವರು ಸಜ್ಜನರು. ದುರ್ದೈವವಷಾತ್ ಅವರು ದುರ್ಜನರ ಸಂಗ ಮಾಡಿದ್ದಾರೆ. ಬಸವಣ್ಣವನರು ಹೇಳಿದ್ದರು ದುರ್ಜನರ ಸಂಗ ಮಾಡಬೇಡಿ ಅಂತ. ಸಜ್ಜನರ ಸಂಗದಿಂದ ಈಗ ದುರ್ಜನರ ಸಂಗಕ್ಕೆ ಹೋಗಿದ್ದಾರೆ ಎಂದು ಶೆಟ್ಟರ್ ಕಡೆಗಣನೆ ಮಾಡಲಾಗಿದೆ ಎಂಬ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಉತ್ತರಿಸಿದರು

ವರುಣಾದಲ್ಲಿ ಜಿದ್ದಾಜಿದ್ದಿ ಪೈಪೋಟಿ ಇದ್ದರು ಅದು ನಮ್ಮ ಪರವಾಗಿದೆ. ರಾಜಕೀಯ ಮತ್ತು ಸಾಮಾಜಿಕ ಸಮೀಕರಣದ ಆಧಾರದಲ್ಲಿ ವರುಣಾದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ಸೋಮಣ್ಣ ಅವರಂತಹ ನಾಯಕರನ್ನು ಅಲ್ಲಿಗೆ ಹಾಕಿದ್ದೇವೆ ಎಂದ ಮೇಲೆ ನಾವು ಸೀರಿಯಸ್ ಆಗಿ ತೆಗೆದುಕೊಂಡಿದ್ದೇವೆ. ನಾಮಪತ್ರ ಹಿಂಪಡೆಯುವ ದಿನದ ನಂತರ ಪ್ರಧಾನಿ ಮೋದಿ ಅವರ ಪ್ರಚಾರ ಶುರು ಆಗಲಿದೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅವರು ಇನ್ನೂ ಅಭ್ಯರ್ಥಿಯ ಘೋಷಣೆ ಯಾಕೆ ಮಾಡಿಲ್ಲವೋ ನನಗೆ ಗೊತ್ತಿಲ್ಲ. ನಾನು ನಾಂಪತ್ರ ಸಲ್ಲಿಸಿ ಬಂದಿದ್ದೇನೆ. ನನಗೆ ನನ್ನ ಕ್ಷೇತ್ರದ ಜನರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಎದುರಾಳಿ ಯಾರು ಅನ್ನೋದು ಮುಖ್ಯ ಅಲ್ಲ. ಜನಾಭಿಪ್ರಾಯ ಮತ್ತು ಜನ ಬೆಂಬಲ ಮುಖ್ಯ. ಅದು ಬಹಳ ದೊಡ್ಡ ಪ್ರಮಾಣದಲ್ಲಿ ನನ್ನ ಮೇಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ