ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಲಿಂಗಾಯತ ಅಭ್ಯರ್ಥಿಯನ್ನು ಮಹಾಪೌರರನ್ನಾಗಿ ಮಾಡಬೇಕು ಎಂದು ಜಾಗತಿಕ ಲಿಂಗಾಯಿತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ಈ ಹಿಂದೆಲ್ಲ ಬೇರೆ ಬೇರೆ ಸಮಾಜದವರು ಮಹಾಪೌರರಾಗಿ ಮತ್ತು ಉಪ ಮಹಾಪೌರರಾಗಿ ಸೇವೆಸಲ್ಲಿಸಿದ್ದಾರೆ. ಈ ಬಾರಿ ಲಿಂಗಾಯಿತರಿಗೆ ಅವಕಾಶವನ್ನು ನೀಡಿ ಸಾಮಾಜಿಕ ನ್ಯಾಯವನ್ನು ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.