LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡಿಸಿಸಿ&ಐ ಹೋಟಲ್ ಮೇನೇಜ್ಮೆಂಟ್ ಕೋರ್ಸ್ : ಪ್ರಾಯೋಗಿಕ ತರಬೇತಿ

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ `ಸ್ಕಿಲ್ ಡೆವಲಪ್ಮೆಂಟ್ ಸೆಂಟರ್' ನೇತೃತ್ವದಲ್ಲಿ ನಡೆಯುತ್ತಿರುವ ಹೋಟಲ್ ಮ್ಯಾನೇಜ್ಮೆಂಟ್ ಕೋರ್ಸ್ನ ಭಾಗವಾಗಿ ವಿದ್ಯಾರ್ಥಿಗಳನ್ನು ತೋರಣಗಲ್ಲು, ಹೊಸಪೇಟೆ ಮತ್ತು ಹಂಪೆಯ ಅಂತಾರಾಷ್ಟ್ರೀಯ ದರ್ಜೆಯ ವಿವಿಧ ಹೋಟಲ್ಗಳಲ್ಲಿ  ಪ್ರಾಯೋಗಿಕ ತರಬೇತಿ ನೀಡಲಾಯಿತು.

ಅಂತಾರಾಷ್ಟ್ರೀಯ ದರ್ಜೆಯ ತೋರಣಗಲ್ಲು ವಿದ್ಯಾನಗರ ಹೋಟಲ್ ಹಯಾತ್, ರಾಕ್ ರೀಜೆನ್ಸಿ, ಹೊಸಪೇಟೆಯ ರಾಯಲ್ ಆರ್ಕಿಡ್, ಹಂಪೆಯ ವಿಜಯಶ್ರೀ ಹೆರಿಟೇಜ್ ಮತ್ತು ದರೋಜಿಯ ಎವಾಲ್ವ್ ಬ್ಯಾಕ್ ಹೋಟಲ್ನಲ್ಲಿ ಒಟ್ಟು 33 ವಿದ್ಯಾರ್ಥಿಗಳಿಗೆ  ಪ್ರಾಯೋಗಿಕ ತರಬೇತಿ ನೀಡಲಾಯಿತು.

ಹೋಟಲ್ ಹಯಾತ್ ಅಸಿಸ್ಟೆಂಟ್ ಜನರಲ್ ಮೇನೇಜರ್ ರವೀಂದ್ರನಾಥ್, ತರಬೇತಿ ಅಧಿಕಾರಿ ನೈಜಲ್ ನಾಯ್ಡು, ರಕ್ಷಿತ್ ಮತ್ತು ಶಂಪಾ ಅವರು, ಹೋಟಲ್ ಕೋಣೆಗಳ ನಿರ್ವಹಣೆ, ಹೋಟಲ್ನಲ್ಲಿಯ ದೈನಂದಿನ ಚಟುವಟಿಕೆಗಳು, ಗ್ರಾಹಕರೊಂದಿಗಿನ ಆತ್ಮೀಯತೆ, ಶಿಸ್ತು-ಸಂಯಮ ಮತ್ತು ಇನ್ನಿತರೆಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ `ಸ್ಕಿಲ್ ಡೆವಲಪ್ಮೆಂಟ್ ಸೆಂಟರ್' ಹೋಟಲ್ ಮೇನೇಜ್ಮೆಂಟ್ ಕೋರ್ಸ್ನ ತರಬೇತುದಾರರಾದ ಅನಿಲ್ ಕನಗಿನಿ ಮತ್ತು ಶ್ರೀಮತಿ ಅನುಷಾ ಅವರು, ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯ ನೀಡಲಿಕ್ಕಾಗಿ ಅಂತಾರಾಷ್ಟ್ರೀಯ ದರ್ಜೆಯ ಹೋಟಲ್ಗಳ ನಿರ್ವಹಣೆ ಮತ್ತು ದೈನಂದಿನ ಚಟುವಟಿಕೆಗಳ ಕುರಿತು ಪ್ರಾಯೋಗಿಕ ತರಬೇತಿ ಅಗತ್ಯವಾಗಿದೆ. ಕಾರಣ ವಿದ್ಯಾರ್ಥಿಗಳನ್ನು ತೋರಣಗಲ್ಲು, ಹೊಸಪೇಟೆ ಮತ್ತು ಹಂಪೆಯ ಹೋಟಲ್ಗಳಿಗೆ ಕರೆದುಕೊಂಡು ಬಂದು, ವೃತ್ತಿಪರರಿಂದಲೇ ಪ್ರಾಯೋಗಿಕ ತರಬೇತಿ ನೀಡಲಾಗಿದೆ ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ `ಸ್ಕಿಲ್ ಡೆವಲಪ್ಮೆಂಟ್ ಸೆಂಟರ್' ಹೋಟಲ್ ಮೇನೇಜ್ಮೆಂಟ್ ಕೋರ್ಸ್ನ ವಿದ್ಯಾರ್ಥಿಗಳಾದ ಎರ್ರಿಸ್ವಾಮಿ ನಾಯಕ್ ಮತ್ತು ಜಿ. ಜ್ಯೋತಿ  ಅವರು, ಬಿಡಿಸಿಸಿ&ಐನ ಹೋಟಲ್ ಮೇನೇಜ್ಮೆಂಟ್ ಕೋರ್ಸ್ನಿಂದ ಕೌಶಲ್ಯಪೂರ್ಣ ತರಬೇತಿ ಸಿಗುತ್ತಿದೆ. ಅಂತಾರಾಷ್ಟ್ರೀಯ ದರ್ಜೆಯ ಹೋಟಲ್ಗಳಲ್ಲಿಯ ದೈನಂದಿನ ನಿರ್ವಹಣೆ - ಚಟುವಟಿಕೆಗಳ ಕುರಿತು ಸಾಕಷ್ಟು ಮಾಹಿತಿ ಸಿಕ್ಕಿದೆ. ಕೋರ್ಸ್ ಪೂರ್ಣಗೊಂಡ ನಂತರ ಇಲ್ಲಿಯ ವಿದ್ಯಾರ್ಥಿಗಳಿಗೆ ಉದ್ಯಮದಲ್ಲಿ ಖಂಡಿತವಾಗಿಯೂ ಅಪಾರ ಬೇಡಿಕೆ ಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಡಿಸಿಸಿ&ಐನ ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನ ಗೌಡ ಅವರು, ಹೋಟಲ್ಗಳ ನಿರ್ವಹಣೆಯಲ್ಲಿ ವೃತ್ತಿಪರತೆ ಅಗತ್ಯವಿದೆ. ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ನಿರುದ್ಯೋಗಿಗಳಿಗೆ ಹೋಟಲ್ ಮೇನೇಜ್ಮೆಂಟ್ ಕೋರ್ಸ್ನ ತರಬೇತಿ ನೀಡಲಾಗುತ್ತಿದೆ. ಮೊದಲನೇ ಬ್ಯಾಚ್ ಕೌಶಲ್ಯತೆ ಆಧರಿಸಿ, ಎರಡನೇ ಬ್ಯಾಚ್ ಪ್ರಾರಂಭಿಸುತ್ತೇವೆ ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರು, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಚೇರ್ಮೆನ್ ಆಗಿರುವ ಯಶವಂತರಾಜ್ ನಾಗಿರೆಡ್ಡಿ ಅವರು, ಜಿಲ್ಲಾ ಪಂಚಾಯಿತಿ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯ ಜಂಟಿ ಆಶ್ರಯದಲ್ಲಿ ಹೋಟಲ್ ಮೇನೇಜ್ಮೆಂಟ್ ಕೋರ್ಸ್ಗೆ ಉಚಿತ ಪ್ರವೇಶ ನೀಡಿ, ಗುಣಮಟ್ಟದ ವೃತ್ತಿ ತರಬೇತಿ ನೀಡಲಾಗಿದೆ. ಶೀಘ್ರದಲ್ಲೇ ಎರಡನೇ ಬ್ಯಾಚ್ ಪ್ರಾರಂಭಿಸಲಾಗುತ್ತದೆ ಎಂದರು.

ಹೋಟಲ್ ಹಯಾತ್ ಮೈಕಲ್, ರಾಯಲ್ ಆರ್ಕಿಡ್ ಇಬ್ರಾಹಿಂ, ಎವಾಲ್ವ್ ಬ್ಯಾಕ್ ಜಾನ್ಸಿ, ವಿದ್ಯಾಶ್ರೀ ರೆಸಾರ್ಟ್ನ ತನುಶ್ರೀ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು