E-PAPER
17 Nov 2026, 05:22:14 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿಯಲ್ಲಿ ಹಲ್ಮಿಡಿ ಶಾಸನಕ್ಕೆ ಕ್ಷಿರಾಭಿಷೇಕ: “ಇದು ಕನ್ನಡಿಗರ ಗಂಡು ಮೆಟ್ಟಿದ ನೆಲ” — ವಾಟಾಳ್ ನಾಗರಾಜ್ ಘೋಷಣೆ

ಬೆಳಗಾವಿ-27:ಬೆಳಗಾವಿ ನಗರದಲ್ಲಿ ಕನ್ನಡಪರ ಸಂಘಟನೆಗಳ ವತಿಯಿಂದ ಮಂಗಳವಾರ ಹಲ್ಮಿಡಿ ಶಾಸನಕ್ಕೆ ಕ್ಷಿರಾಭಿಷೇಕ ಹಾಗೂ ಪವಿತ್ರ ಜಲಾಭಿಷೇಕ ನೆರವೇರಿಸಿ, ಕನ್ನಡದ ಅಸ್ತಿತ್ವ ಮತ್ತು ಗೌರವವನ್ನು ಪ್ರತಿಪಾದಿಸುವ ವಿಶಿಷ್ಟ ಕಾರ್ಯಕ್ರಮ ಜರುಗಿತು. ಕನ್ನಡಪರ ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ನೂರಾರು ಕನ್ನಡಾಭಿಮಾನಿಗಳು ಭಾಗವಹಿಸಿ “ಬೆಳಗಾವಿ ಕನ್ನಡಿಗರ ಗಂಡು ಮೆಟ್ಟಿದ ನೆಲ” ಎಂಬ ಘೋಷಣೆಗಳೊಂದಿಗೆ ಕನ್ನಡಪರ ವಾತಾವರಣ ನಿರ್ಮಿಸಿದರು.

ಈ ಸಂದರ್ಭದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, “ಹಲ್ಮಿಡಿ ಶಾಸನ ಕನ್ನಡದ ಇತಿಹಾಸದ ಹೆಮ್ಮೆಯ ಸಂಕೇತ. ಕನ್ನಡ ಭಾಷೆ, ನೆಲ ಮತ್ತು ಸಂಸ್ಕೃತಿಯ ಮೇಲೆ ಯಾರೇ ದಾಳಿ ಮಾಡಲು ಮುಂದಾದರೂ ಕನ್ನಡಿಗರು ತಕ್ಕ ಉತ್ತರ ನೀಡುತ್ತಾರೆ” ಎಂದು ಎಚ್ಚರಿಕೆ ನೀಡಿದರು.

“ಬೆಳಗಾವಿ ಕನ್ನಡಿಗರ ಆಸ್ತಿ”

ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡಪರ ನಾಯಕರು, “ಬೆಳಗಾವಿ ಕನ್ನಡಿಗರ ಗಂಡು ಮೆಟ್ಟಿದ ನೆಲ. ಇದು ಕನ್ನಡಿಗರ ಆಸ್ತಿ. ಈ ನೆಲದ ಇತಿಹಾಸ, ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ” ಎಂದು ಹೇಳಿದರು.

ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಕನ್ನಡಪರ ಕಾರ್ಯಕರ್ತರು ಹಲ್ಮಿಡಿ ಶಾಸನದ ಪ್ರತಿರೂಪಕ್ಕೆ ಹಾಲು ಹಾಗೂ ಪವಿತ್ರ ಜಲಾಭಿಷೇಕ ನೆರವೇರಿಸಿ, ಕನ್ನಡ ಧ್ವಜಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು. “ಕನ್ನಡ ಉಳಿಯಬೇಕು”, “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ”, “ಕನ್ನಡ ವಿರೋಧಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ” ಎಂಬ ಘೋಷಣೆಗಳು ಮೊಳಗಿದವು.

ಪಾಲಿಕೆಯಲ್ಲಿ ಕನ್ನಡಪರ ನಿರ್ಣಯಕ್ಕೆ ಒತ್ತಾಯ

ಈ ವೇಳೆ ಮಾತನಾಡಿದ ಹೋರಾಟಗಾರರು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಪರ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕನ್ನಡ ನಾಮಫಲಕ, ಸರ್ಕಾರಿ ಕಚೇರಿಗಳಲ್ಲಿ ಕನ್ನಡದ ಬಳಕೆ ಹಾಗೂ ಕನ್ನಡಿಗರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

“ಬೆಳಗಾವಿಯಲ್ಲಿ ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ತರಲು ಯತ್ನಿಸುವ ಯಾವುದೇ ಶಕ್ತಿಯನ್ನು ಕನ್ನಡಿಗರು ಸಹಿಸುವುದಿಲ್ಲ. ಕನ್ನಡ ವಿರೋಧ ಮಾಡುವವರಿಗೆ ಪಾಠ ಕಲಿಸುವುದು ನಮಗೆ ಗೊತ್ತಿದೆ” ಎಂದು ವಾಟಾಳ್ ನಾಗರಾಜ್ ಹೇಳಿದರು.

ಪೊಲೀಸ್ ಬಿಗಿ ಭದ್ರತೆ

ಕಾರ್ಯಕ್ರಮದ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿತ್ತು. ಪ್ರಮುಖ ವೃತ್ತಗಳು ಹಾಗೂ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಕಾರ್ಯಕ್ರಮ ಶಾಂತಿಯುತವಾಗಿ ನಡೆಯಿತು.

ಕನ್ನಡಾಭಿಮಾನಿಗಳಲ್ಲಿ ಉತ್ಸಾಹ

ಕಾರ್ಯಕ್ರಮದಲ್ಲಿ ಯುವಕರು, ಮಹಿಳೆಯರು ಹಾಗೂ ಹಿರಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದು ಗಮನ ಸೆಳೆಯಿತು. ಕನ್ನಡ ಧ್ವಜಗಳನ್ನು ಹಿಡಿದು ಘೋಷಣೆ ಕೂಗಿದ ಕಾರ್ಯಕರ್ತರು ಕನ್ನಡಪರ ಹೋರಾಟಕ್ಕೆ ಇನ್ನಷ್ಟು ಬಲ ತುಂಬುವ ಸಂಕಲ್ಪ ವ್ಯಕ್ತಪಡಿಸಿದರು.

ಕನ್ನಡದ ಇತಿಹಾಸವನ್ನು ಸಾರುವ ಹಲ್ಮಿಡಿ ಶಾಸನಕ್ಕೆ ಅಭಿಷೇಕ ನೆರವೇರಿಸುವ ಮೂಲಕ ಬೆಳಗಾವಿಯಲ್ಲಿ ಮತ್ತೊಮ್ಮೆ ಕನ್ನಡಾಭಿಮಾನ ಉಕ್ಕಿ ಹರಿದ ದೃಶ್ಯ ಕಂಡುಬಂದಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ