LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಳಗಾವಿ ಮೂಲದ ಶೃತಿ ಯರಗಟ್ಟಿ ಅವರ ಯುಪಿಎಸ್‌ಸಿ ಸಾಧನೆ..!!

ಬೆಳಗಾವಿ : ಬೆಳಗಾವಿ ಮೂಲದ ಶೃತಿ ಯರಗಟ್ಟಿ ಕೂಡ ಯುಪಿಎಸ್‌ಸಿಯಲ್ಲಿ ಸಾಧನೆ ಮಾಡಿದವರಲ್ಲಿ ಒಬ್ಬರು. 362ನೇ ರ್‍ಯಾಂಕ್‌ ಪಡೆದಿರುವ ಶೃತಿ ಅವರು ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದ ನಿವಾಸಿ.

ಶಿರಢಾಣ ಗ್ರಾಮದ ಡಾ.ಗಂಗಾಧರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ್ದ ಅವರು, ಕೆಸಿಡಿ ಧಾರವಾಡದಲ್ಲಿ ಪಿಯು ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿದ್ದಾರೆ. ಬಿಎಸ್ ಸಿಯಲ್ಲಿ 7 ಚಿನ್ನದ ಪದಕ ಗಳಿಸಿದ್ದಾರೆ.

ಪದವಿ ಬಳಿಕ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸಲು ಶುರು ಮಾಡಿದರು. 1 ವರ್ಷಗಳ ಕಾಲ ಕೋಚಿಂಗ್ ಅನ್ನು ಸಹ ಪಡೆದುಕೊಂಡಿದ್ದರು. 5 ಪ್ರಯತ್ನಗಳಲ್ಲಿ ವಿಫಲರಾದ ಬಳಿಕ ತಮ್ಮ 6ನೇ ಪ್ರಯತ್ನದಲ್ಲಿ ಶೃತಿ ಯುಪಿಎಸ್‌ಸಿ ಪಾಸ್ ಮಾಡಿದ್ದಾರೆ.

ಮೊದಲ 3 ಪ್ರಯತ್ನಗಳಲ್ಲಿ ಶೃತಿ ಅವರಿಗೆ ಪ್ರಿಲಿಮ್ಸ್ ಸಹ ಪಾಸ್ ಮಾಡಲು ಆಗಲಿಲ್ಲ. 4ನೇ ಬಾರಿ ಸಂದರ್ಶನದ ಹಂತಕ್ಕೆ ಹೋದರೂ ಅಂತಿಮ ಯಶಸ್ಸು ಸಿಗಲಿಲ್ಲ. 5ನೇ ಪ್ರಯತ್ನದಲ್ಲೂ ಸಾಧ್ಯವಾಗಲಿಲ್ಲ. ಕೊನೆಗೆ 6ನೇ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ.

ಶೃತಿ ಅವರಿಗೆ ಅವರ ಶಾಲಾ ಶಿಕ್ಷಕರೊಬ್ಬರು ಐಎಎಸ್, ಐಪಿಎಸ್ ಅಧಿಕಾರಿಗಳ ಬಗ್ಗೆ ತಿಳಿಸಿದ್ದು ಅದರಿಂದ ಸ್ಪೂರ್ತಿ ಪಡೆದು, ಅಂದಿನಿಂದ ತಮ್ಮ ಗುರಿಯತ್ತ ಸಾಗಲು ಶ್ರಮವಹಿಸಿದರು. ಶೃತಿ ಅವರ ತಂದೆ ನಿವೃತ್ತ ಶಾಲಾ ಶಿಕ್ಷಕರಾಗಿದ್ದಾರೆ. ಇವರ ಕುಟುಂಬದಲ್ಲೇ ಯುಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಿರುವವರಲ್ಲಿ ಶೃತಿ ಅವರೇ ಮೊದಲಿಗರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026