Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸಮಯ ಬದಲಾವಣೆ

ಬೆಳಗಾವಿ: ನೈರುತ್ಯ ರೈಲ್ವೆ ವಲಯದ ಮಹಾ ಪ್ರಬಂಧಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟ‌ರ್ ಅವರು ಸೋಮವಾರ ಚರ್ಚಿಸಿ, ತಮ್ಮ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಕಾಮಗಾರಿಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.

ಪ್ರಸ್ತಾಪಿತ ಬೆಳಗಾವಿ - ಕಿತ್ತೂರು - ಧಾರವಾಡ ನೂತನ ರೈಲು ಮಾರ್ಗದ ಕುರಿತು ಸಂಸದರಿಗೆ ಮಾಹಿತಿ ನೀಡಿದ ಅಧಿಕಾರಿಗಳು, 'ಧಾರವಾಡ ಬಳಿ 16 ಎಕರೆ ಜಮೀನು ಹೊರತುಪಡಿಸಿ, ಕಾಮಗಾರಿ ಆರಂಭಕ್ಕೆ ಅವಶ್ಯವಿರುವ ಭೂ ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರಗೊಂಡ ನಂತರ ಟೆಂಡ‌ರ್ ಕರೆದು ಶೀಘ್ರ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ರೈಲ್ವೆ ವಲಯಕ್ಕೆ ಶೀಘ್ರವೇ ಭೂಮಿ ಹಸ್ತಾಂತರಿಸುವಂತೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಸಂಸದರು ತಿಳಿಸಿದರು.

ಲೋಕಾಪುರ - ರಾಮದುರ್ಗ - ಸವದತ್ತಿ -ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಅಗತ್ಯವಿರುವ ಪೂರ್ವ ಸಮೀಕ್ಷೆ ಕಾರ್ಯಕ್ಕೆ ಅನುಮೋದನೆ ಪಡೆಯಲು ರೈಲ್ವೆ ಮಂಡಳಿ ಜೊತೆ ನಿರಂತರ ಸಂಪರ್ಕದಲ್ಲಿ ಇರುವಂತೆ ಅಧಿಕಾರಿಗಳಿಗೆ ಶೆಟ್ಟ‌ರ್ ಸೂಚಿಸಿದರು.

ಬೆಳಗಾವಿ ನಗರ ಲೆವಲ್ ಕ್ರಾಸಿಂಗ್ 381ರ ಹತ್ತಿರ ಎರಡನೇ ಲೈನ್ ಪ್ರಾರಂಭಕ್ಕೆ ಇರುವ ತೊಂದರೆ ನಿವಾರಿಸಲು ವಾಹನಗಳ ಓಡಾಟದ ಮಾರ್ಗ ಬದಲಾವಣೆಗೆ ಅಗತ್ಯ ಪರವಾನಗಿಯನ್ನು ಪೋಲಿಸ್ ಇಲಾಖೆಯಿಂದ ಪಡೆಯಲು ಸೂಚಿಸಿದ ಅವರು, ಸ್ಥಳಕ್ಕೆ ಭೇಟಿನೀಡಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ರೈಲ್ವೆ ಮಹಾಪ್ರಬಂಧಕ ಮುಕುಲ್ ಸರನ್ ಮಾಥರ್‌ ಅವರಿಗೆ ತಿಳಿಸಿದರು.

ಪ್ರಧಾನ ಮಂತ್ರಿ ಅಮೃತ ಸ್ಟೇಶನ್ ಯೋಜನೆಯಡಿ ಅಭಿವೃದ್ಧಿಗೆ ಬೆಳಗಾವಿ ನಿಲ್ದಾಣ ಆಯ್ಕೆಯಾಗಿದೆ. ಆದರೆ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರಿಂದ ದೂರುಗಳು ಬಂದಿವೆ. ಲಿಫ್ಟ್, ಎಲಿವೇಟ‌ರ್, ಫುಟ್ ಓವರ್ ಬ್ರಿಡ್ಜ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಘಟಪ್ರಭಾ ನಿಲ್ದಾಣದಲ್ಲಿಯೂ ಫುಟ್ ಓವ‌ರ್ ಬ್ರಿಡ್ಜ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಸಂಸದರು ಸೂಚಿಸಿದರು.

ಬೆಳಗಾವಿ - ಮಣಗೂರ, ಬೆಳಗಾವಿ - ಮಡಗಾಂವ್ -ಉಡುಪಿ - ಮಂಗಳೂರು, ಬೆಳಗಾವಿ- ಚೆನೈ (ತಿರುಪತಿ ಮಾರ್ಗವಾಗಿ) ನೂತನ ರೈಲು ಪ್ರಾರಂಭಕ್ಕೆ, ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು ಸಂಚಾರವನ್ನು ಬೆಳಗಾವಿಯಿಂದ ಬೆಳಿಗ್ಗೆ 6 ಗಂಟೆಗೆ ಆರಂಭವಾಗುವಂತೆ ಹಾಗೂ ಹುಬ್ಬಳ್ಳಿ - ಬೆಳಗಾವಿ - ಪುಣೆ ನಡುವಿನ ವಂದೇ ಭಾರತ ರೈಲು ವಾರದ ಎಲ್ಲ ದಿನ ಸಂಚರಿಸುವಂತೆ ನೋಡಿಕೊಳ್ಳುವಂತೆಯೂ ಸೂಚಿಸಿದರು.

ಪ್ರಮೋದ ಜೋಶಿ, ಚಿದಾನಂದ ಧೀಮಶೆಟ್ಟಿ, ಗುರುಪಾದ ಕಳ್ಳಿ, ಈರಣ್ಣ ಚಂದರಗಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ