Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮನರೇಗಾ ಕೂಲಿಕಾರರಿಗೆ ಕೆಲಸ ಒದಗಿಸುವಲ್ಲಿ ಬೆಳಗಾವಿ ಜಿಲ್ಲೆ ಮೊದಲು

 

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆಯೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿದೆ. ಅದರ ಪೈಕಿ ಎಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಮಾಡಲಾಗಿದೆ. ಮುಖ್ಯವಾಗಿ ಮೇ ಮತ್ತು ಜೂನ್ ತಿಂಗಳಲ್ಲಿ ಸತತ ಪ್ರತಿದಿನ ಒಂದು ಲಕ್ಷಕ್ಕೂ ಮೇಲ್ಪಟ್ಟು ಕೂಲಿಕಾರರು ಕೆಲಸ ನಿರ್ವಹಿಸಿರುವುದು ವಿಶೇಷ. ಕಳೆದ ಸಾಲಿನ ಆರ್ಥಿಕ ವರ್ಷದ ಮೊದಲ ಈ ಮೂರು ತಿಂಗಳಲ್ಲಿ 42.67 ಲಕ್ಷ ಮಾನವ ದಿನಗಳ ಸೃಜನೆಯಾಗಿತ್ತು. ಆದರೆ ಈ ಬಾರಿ 61.41 ಲಕ್ಷ ಮಾನವ ದಿನ ಸೃಜನೆಯಾಗಿದ್ದು ನಿರೀಕ್ಷೆಗೂ ಮೀರಿ ಸಾಧನೆಯಾಗಿದೆ. ಕಳೆದ ವರ್ಷಕ್ಕೂ ಪ್ರಸ್ತುತ ವರ್ಷಕ್ಕೂ 18.73 ಲಕ್ಷ ಮಾನವ ದಿನ ಸೃಜನೆ ಮಾಡುವುದರೊಂದಿಗೆ ಶೇ 43.91 ರಷ್ಟು ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ.

ಮಾನವ ದಿನ ಸೃಜನೆಯಲ್ಲಿ ಮೊದಲ ಐದು ಸ್ಥಾನದಲ್ಲಿರುವ ಜಿಲ್ಲಾವಾರು ಮಾಹಿತಿ
ಕ್ರ.ಸಂ. ಜಿಲ್ಲೆ ಮಾನವ ದಿನಗಳ ಸೃಜನೆ (ಲಕ್ಷಗಳಲ್ಲಿ)
1 ಬೆಳಗಾವಿ 61.41
2 ರಾಯಚೂರು 58.75
3 ಕೊಪ್ಪಳ 57.37
4 ಬಳ್ಳಾರಿ 49.19
5 ವಿಜಯನಗರ 42.51

ಒಂದೇ ದಿನದಲ್ಲಿ 2.78 ಲಕ್ಷ ಮಾನವ ದಿನದ ಸೃಜನೆಯ ಸಾಧನೆ: ಬೆಳಗಾವಿ ಜಿಲ್ಲೆಯು ನರೇಗಾ ಯೋಜನೆಯಡಿ ಪ್ರಪ್ರಥಮ ಬಾರಿಗೆ ದಿನಾಂಕ: 01-07-2023 ರಂದು ಒಂದೇ ದಿನದಲ್ಲಿ 2.78 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿರುವುದು ರಾಜ್ಯದಲ್ಲಿಯೇ ಇಲ್ಲಿಯವರೆಗೆ ಗರಿಷ್ಠ ಸಾಧನೆಯಾಗಿದೆ.

ಮಹಿಳೆಯರ ಭಾಗವಹಿಸುವಿಕೆ ಪ್ರಮಾಣ ಶೇ.58.66: ಬೆಳಗಾವಿ ಜಿಲ್ಲೆಯಾದ್ಯಂತ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಮನರೇಗಾ ಯೋಜನೆಯಡಿ ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಕೂಲಿ ಒದಗಿಸಲಾಗಿದ್ದು, ಸನ್ 2022-23 ನೇ ಸಾಲಿನಲ್ಲಿ 54.40% ರಷ್ಟು ಮಹಿಳಾ ಭಾಗವಹಿಸುವಿಕೆ ಪ್ರಮಾಣ ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.58.66 ರಷ್ಟು ಮಹಿಳೆಯರು ಮನರೇಗಾದಡಿ ಉದ್ಯೋಗ ಪಡೆದುಕೊಂಡಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದಾಗ ಕೇವಲ 3 ತಿಂಗಳಲ್ಲಿ ಶೇ.4.24 ರಷ್ಟು ಮಹಿಳೆಯರ ಭಾಗವಹಿಸುವಿಕೆ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ನಿರಂತರವಾಗಿ ಜನರಿಗೆ ಮನರೇಗಾ ಯೋಜನೆಯ ಕುರಿತು ಮನೆ ಮನೆ ಭೇಟಿ, ಸ್ವಸಹಾಯ ಸಂಘದ LCRP, MBK, ಕೃಷಿ ಸಖಿ ಹಾಗೂ ಪಶು ಸಖಿರವರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷವಾಗಿ ತಾಲ್ಲೂಕಾ ಮಟ್ಟದಲ್ಲಿ ತಾಲ್ಲೂಕಾ ಐ.ಇ.ಸಿ ಸಂಯೋಜಕರು ಹಾಗೂ ಆಡಳಿತ ಸಹಾಯಕರು ಗ್ರಾಮ ಪಂಚಾಯತಿ ಹಾಗೂ ಕಾಮಗಾರಿ ಸ್ಥಳಗಳಿಗೆ ನಿರಂತರ ಭೇಟಿ ಹಾಗೂ ಪರಿಶೀಲನೆ ಕಾರ್ಯ ಜರುಗಿಸಿರುವುದರಿಂದ ಜನರಿಗೆ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ತಲುಪಿಸಲು ಅನುಕೂಲವಾಗಿದೆ.

ಜಿಲ್ಲೆಯಾದ್ಯಂತ ನರೇಗಾದಡಿ ಅಧಿಕ ಪ್ರಮಾಣದಲ್ಲಿ ಜನರು ಕೂಲಿ ಕೆಲಸ ಪಡೆದು ರಾಜ್ಯದಲ್ಲಿಯೇ ಅತಿ ಹೆಚ್ಚು ಮಾನವ ದಿನ ಸೃಜನೆ ಮಾಡಿದ್ದು ಸಂತಸದ ವಿಷಯವಾಗಿದ್ದು. ಜಿಲ್ಲೆಯ ಎಲ್ಲ ತಾಲ್ಲೂಕಿನ ಹಾಗೂ ಗ್ರಾಮ ಪಂಚಾಯತಿಯ ಅಧಿಕಾರಿ/ಸಿಬ್ಬಂದಿಯವರ ಶ್ರಮ ಹಾಗೂ ಸಹಕಾರದಿಂದ ಹೆಚ್ಚಿನ ಪ್ರಗತಿ ಸಾಧ್ಯವಾಗಿದೆ. ಅದೇರೀತಿ ವಿಶೇಷ ಚೇತನರು, ಹಿರಿಯನಾಗರಿಕರು ಮತ್ತು ಮಹಿಳೆಯರು ಇನ್ನು ಹೆಚ್ಚೆಚ್ಚು ಯೋಜನೆಯಡಿ ಭಾಗಿಯಾಗಿ ಮನರೇಗಾ ಯೋಜನೆಯ ಉಪಯೋಗ ಪಡೆದುಕೊಳ್ಳಬೇಕು.

ಹರ್ಷಲ್ ಭೊಯರ್ ಭಾ.ಆ.ಸೇ
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು
ಜಿಲ್ಲಾ ಪಂಚಾಯತ ಬೆಳಗಾವಿ

ಈ ಬಾರಿ ಮುಂಗಾರು ವಿಳಂಬವಾಗಿರುವುದರಿಂದ ರೈತರು ಬಿತ್ತನೆ ಕಾರ್ಯ ಮಾಡಲು ಸಾಧ್ಯವಾಗದೇ ಇರುವುದರಿಂದ ವಾಡಿಕೆಯಂತೆ ರೈತರ ಜಮೀನುಗಳಲ್ಲಿ ಸಧ್ಯಕ್ಕೆ ಯಾವುದೇ ಕೆಲಸಗಳು ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನರೇಗಾ ಕಾಮಗಾರಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಇನ್ನು ಹೆಚ್ಚು ಹೆಚ್ಚು ರೈತರು/ಕೂಲಿಕಾರರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ರವಿ ಎನ್ ಬಂಗಾರೆಪ್ಪನವರ
ಯೋಜನಾ ನಿರ್ದೇಶಕರು ಡಿ.ಆರ್.ಡಿ.ಎ ಶಾಖೆ
ಜಿಲ್ಲಾ ಪಂಚಾಯತ ಬೆಳಗಾವಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ