E-PAPER
16 Nov 2026, 02:19:41 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಡಿಸೆಂಬರ ಒಳಗೆ ಬೆಳಗಾವಿ ಜಿಲ್ಲಾ ವಿಭಜನೆ ಆಗಲಿ ; ಈರಣ್ಣ ಕಡಾಡಿ

ಬೆಳಗಾವಿ; ಇದೇ ಡಿಸೆಂಬರ್ ತಿಂಗಳ ಒಳಗಾಗಿ ಜಿಲ್ಲಾ ವಿಭಜನೆ ಕುರಿತು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಪತ್ರಿಕಾ ಪರಿಷತ್ತಿನಲ್ಲಿ ಮಾತನಾಡಿದ ಅವರಿಂದು ಮುಖ್ಯಮಂತ್ರಿಗಳು, ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಈ ಸಂಬಂಧ ಒತ್ತಾಯಿಸಿದರು. ಹಲವು ದಶಕಗಳ ಬೇಡಿಕೆ ಆಗಿರುವ ಬೆಳಗಾವಿ ಜಿಲ್ಲಾ ವಿಭಜನೆ ಇದೆ ವರ್ಷದ ಡಿಸೆಂಬರ್ ತಿಂಗಳ ಒಳಗಾಗಿ ಮುಗಿಸಬೇಕು ಇಲ್ಲದೆ ಹೋದಲ್ಲಿ ಮುಂದೆ 2028 ರ ಚುನಾವಣೆ ಮುಗಿಯುವವರೆಗೂ ಸಾಧ್ಯವಾಗುವುದಿಲ್ಲ ಎಂದರು.

2026 ಎಪ್ರಿಲ್ ತಿಂಗಳಿನಿಂದ ಜನಗಣತಿ ಆರಂಭಿಸುವುದಾಗಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ ಜನಗಣತಿ ಮುಗಿಯಲು ಎರಡು ವರ್ಷಗಳು ಬೇಕು ಅದಾದ ನಂತರ 2028 ಕ್ಕೆ ಮತ್ತೆ ಚುನಾವಣೆ ಬರುತ್ತದೆ ಹೀಗಾಗಿ ಈಗಲೇ ಜಿಲ್ಲಾ ವಿಭಜನೆ ಘೋಷಣೆ ಆಗದೆ ಹೋದಲ್ಲಿ ಮುಂದೆ ಮೂರು ವರ್ಷಗಳ ಕಾಲ ವಿಭಜನೆ ಸಾಧ್ಯವಿಲ್ಲ ಆದಕಾರಣ ಯಾವುದೇ ರಾಜಕಾರಣಿಗಳ ಅಥವಾ ವ್ಯಕ್ತಿಗಳ ಹಿತಾಸಕ್ತಿಯನ್ನು ಪರಿಗಣಿಸದೆ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ, ಆಡಳಿತಾತ್ಮಕ ಹಿತದ  ದೃಷ್ಟಿಯಿಂದ ಜಿಲ್ಲೆ ವಿಭಜನೆ ಅವಶ್ಯವಾಗಿದೆ.

ಅತಿ ದೊಡ್ಡ ಜಿಲ್ಲೆ ಆಗಿರುವುದರಿಂದ ಆಡಳಿತ ನಡೆಸುವುದು ಕಷ್ಟವಾಗಿದೆ ಅಲ್ಲದೆ ಜಿಲ್ಲೆಗೆ ಬರಬಹುದಾದ ಅನುದಾನದಲ್ಲೂ ಹಾನಿಯಾಗಿದೆ. ಇಷ್ಟು ದೊಡ್ಡ ಜಿಲ್ಲೆಯನ್ನು ಕಂಟ್ರೋಲ್ ಮಾಡುವುದು ಡಿಸಿ, ಎಸ್ಪಿ , ಮತ್ತು ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಕಷ್ಟವಾಗುತ್ತಿದೆ.

1973 ರಲ್ಲಿ ವಾಸುದೇವ ಆಯೋಗದ ವರದಿ ,ನಂತರ ಬಂದ ಹುಂಡೆಕಾರ ಆಯೋಗದ ವರದಿ, ಗದ್ದಿಗೌಡರ್ ಆಯೋಗದ ವರದಿ ಮತ್ತು ಎಂ.ಪಿ. ಪ್ರಕಾಶ್ ಆಯೋಗಗಳು ಜಿಲ್ಲಾ ವಿಭಜನೆ ಕುರಿತು ನೀಡಿದ ವರದಿಗಳನ್ನು  ಸರಕಾರಗಳು ಕಸದ ಬುಟ್ಟಿಗೆ ಹಾಕಿವೆ. ಇತ್ತೀಚಿಗೆ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಸಚಿವರು ಜಿಲ್ಲಾ ವಿಭಜನೆ ಮತ್ತು ನೂತನ ಜಿಲ್ಲೆಗಳ ರಚನೆ ಕುರಿತು ಹೇಳಿಕೆ ನೀಡಿದ್ದಾರೆ ಇವರಿಗೆ ನಿಜವಾದ ಇಚ್ಛಾ ಶಕ್ತಿ ಇದ್ದಲ್ಲಿ ತಕ್ಷಣ ಹೊಸ ಜಿಲ್ಲೆಗಳ ರಚನೆ ಕುರಿತು ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಜಿಲ್ಲಾ ವಿಭಜನೆಯಿಂದ ಗಡಿ ವಿವಾದಕ್ಕೆ ಯಾವುದೇ ರೀತಿಯ ಹಿನ್ನಡೆ ಆಗದು, ಗಡಿ ವಿವಾದ ಮುಗಿದ ಅಧ್ಯಾಯ ಈಗ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ, ಭಾಷೆ ಹೆಸರಿನಲ್ಲಿ ರಾಜಕಾರಣ ಮಾಡುವ ಕೆಲವರು ಗಡಿ ವಿವಾದವನ್ನು ಜೀವಂತವಾಗಿ ಇಡಲು ಪ್ರಯತ್ನಿಸುತ್ತಿದ್ದಾರೆ ಅದು ಸಾಧ್ಯವಾಗದು. ತಕ್ಷಣ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲೆಯ ಸಚಿವರು ಮತ್ತು ಎಲ್ಲ ಜನಪ್ರತಿನಿಧಿಗಳನ್ನು ಕರೆದು ಸಭೆ ನಡೆಸಿ ತಕ್ಷಣ ಈ ಕುರಿತು ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ ಜಿನದತ್ತ ದೇಸಾಯಿಯವರ ಬದುಕು ಬರಹ ನಮಗೆಲ್ಲ ಮಾದರಿ- ಪ್ರಾ ಬಿ ಎಸ್ ಗವಿಮಠ CCEA ಮತ್ತು ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿಅಂಜುಮನ್ ಪದವಿ ಕಾಲೇಜಿಗೆ ಚಾಂಪಿಯನಶಿಪ್‌ ಪ್ರಶಸ್ತಿಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ , ಮಾಜಿ ಸಚಿವ, ಶಿವಾನಂದ ಕೌಜಲಗಿ ಲಿಂಗೈಕ್ಯರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerರಾಜಾ ಲಖಮಗೌಡರು, ಶಿರಸಂಗಿ ಲಿಂಗರಾಜರು ಮತ್ತು  ಪಾಟೀಲ ಪುಟ್ಟಪ್ಪ ಭಾವ ಚಿತ್ರಗಳನ್ನು ಆಹ್ವಾನ ಪತ್ರಿಕೆಗಳಲ್ಲಿ ಮುದ್ರಿಸಬೇಕು ; ಡಾ.ಸರಜೂ ಕಾಟ್ಕರಭ್ರಷ್ಟಾಚಾರ ರಹಿತ ಸಮ ಸಮಾಜ ನಿರ್ಮಾಣ ಶರಣರ ತತ್ವಗಳಿಂದ ಮಾತ್ರ ಸಾಧ್ಯ ; ಡಾ.ಬಸವರಾಜ ಹುಲಮನಿನಿಯಮ ಉಲ್ಲಂಘಿಸುವ ಹೋಟೆಲ್, ಪಬ್, ಡಾಬಾಗಳ ವಿರುದ್ಧ ಕಠಿಣ ಕ್ರಮ: ಪೊಲೀಸ್ ಕಮಿಷನರ್ ನಿಕ್ಕಂ ಎಚ್ಚರಿಕೆಜೆಎಲ್ಎಂ ಕಚೇರಿಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ