Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ : ಅನಗೋಳ ಬ್ರಹ್ಮ ಕುಮಾರಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯುವ ದಿನ 

ಬೆಳಗಾವಿ : ಅನಗೋಳ ಬ್ರಹ್ಮ ಕುಮಾರಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯುವ ದಿನ ಆಚರಿಸಲಾಯಿತು.

ವಿದ್ಯಾ ಅವರ ಮಾರ್ಗದರ್ಶನದಲ್ಲಿ  ಅಂತರಾಷ್ಟ್ರೀಯ ಯುವ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು.

ಗೋಮಟೇಶ ಕಾಲೇಜಿನ ಅತ್ಯಂತ ಕಿರಿಯ ಪ್ರಾಂಶುಪಾಲ ಗೌತಮ  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಐಟಿ ವೃತ್ತಿಪರರು, ಇಂಜಿನಿಯರ್‌ಗಳು, ಆರ್ಕಿಟೆಕ್ಟ್‌ಗಳು ಮತ್ತು ಹಣಕಾಸು ಕ್ಷೇತ್ರದವರು ಉಪಸ್ಥಿತರಿದ್ದರು.

ಶೀತಲ್ ಅವರು ಯುವ ದಿನದ ಇತಿಹಾಸ ಮತ್ತು ಅದರ ಉದ್ದೇಶದ ಬಗ್ಗೆ ಸಂಕ್ಷಿಪ್ತ ಪರಿಚಯ ನೀಡಿ, ಯುವಕರು ತಮ್ಮ ಆಂತರಿಕ ಶಕ್ತಿಯನ್ನು ಗುರುತಿಸಬೇಕು ಮತ್ತು ಉತ್ತಮ ಚಾರಿತ್ರ್ಯವನ್ನು ಕಾಪಾಡಿಕೊಳ್ಳಬೇಕು. ಆಧ್ಯಾತ್ಮಿಕ ಶಕ್ತಿ ಮತ್ತು ಮೌಲ್ಯಗಳಿಂದಲೇ ಭಾರತವನ್ನು ಸಬಲಗೊಳಿಸಬಹುದು. ಮೌಲ್ಯಗಳಿಲ್ಲದ ಜೀವನಕ್ಕೆ ಯಾವುದೇ ಮೌಲ್ಯವಿಲ್ಲ" ಎಂದು ಹೇಳಿದರು.

ಗೌತಮ ಅವರು, ಯುವ ವಿಜ್ಞಾನಿಗಳು ಮಾಡಿದ ರಾಕೆಟ್ ಉಡಾವಣೆ, ಡ್ರೋನ್ ಹಾರಾಟದಂತಹ ಇತ್ತೀಚಿನ ತಾಂತ್ರಿಕ ಪ್ರಗತಿಗಳ ಬಗ್ಗೆ ಮಾಹಿತಿ ನೀಡಿದರು.  
ಬಸವೇಶ್ವರ ಅವರು, ಅರುಣಾಚಲ ಪ್ರದೇಶದಲ್ಲಿ ತಯಾರಾದ ಹಾರುವ ಕಾರಿನ ಬಗ್ಗೆ ಮಾತನಾಡಿದರು.  

ದರ್ಶನ ಅವರು, ಯುವ ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬಳಸುವ ಮಹತ್ವವನ್ನು ವಿವರಿಸಿದರು.  
ಗುಂಡು ಅವರು ಮೆಕ್ಯಾನಿಕಲ್ ಇಂಜಿನಿಯರ್ ಅವರು ಬ್ರಹ್ಮ ಕುಮಾರೀಸ್ ಜೊತೆ ಸಂಪರ್ಕ ಹೊಂದಿದ ನಂತರ ತಮ್ಮ ಜೀವನದಲ್ಲಿ ಆದ ಬದಲಾವಣೆಯನ್ನು ಹಂಚಿಕೊಂಡರು.  
ಬ್ರಹ್ಮ ಕುಮಾರೀಸ್ ಯುವ ವಿಭಾಗ ಸಂಯೋಜಕ ಶ್ರೀಕಾಂತ ಅವರು 'Touch the Light'_ ಯೋಜನೆಯ ಮೂಲಕ ಯುವಕರನ್ನು ನಕಾರಾತ್ಮಕತೆಯಿಂದ ಸಕಾರಾತ್ಮಕತೆಗೆ ತರುವ ಕೆಲಸ ಮಾಡುತ್ತಿರುವುದನ್ನು ತಿಳಿಸಿದರು.

ವಿದ್ಯಾ ಅವರು ಭಾರತದ ಶೇಕಡಾ 65ರಷ್ಟು ಇರುವ ಯುವಕರ ಜೀವನದಲ್ಲಿ ಸಕಾರಾತ್ಮಕತೆ ಮತ್ತು ಆಧ್ಯಾತ್ಮವನ್ನು ತರಲು ರಾಜಯೋಗ ಧ್ಯಾನದ ಮಹತ್ವವನ್ನು ಒತ್ತಿ ಹೇಳಿದರು. ಸಾಫ್ಟ್‌ವೇರ್ ಇಂಜಿನಿಯರ್ ಪೂರ್ಣಿಮಾ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ