LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ; ಜೂನ್ 20ರಂದು ನೇರ ಸಂದರ್ಶನ

ಬಳ್ಳಾರಿ, ಜೂನ್ 19: ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿಸುದ್ದಿ. ಬಳ್ಳಾರಿಯಲ್ಲಿ ಜೂನ್ 20ರ ಗುರುವಾರ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಪಿಯುಸಿ ಅಥವಾ ಯಾವುದೇ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು, ಅಗತ್ಯ ದಾಖಲೆಗಳ ಜೊತೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು

ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ

ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಜೂನ್ 20ರಂದು ನೇರ ಸಂದರ್ಶನ ಪಾರ್ವತಿ ನಗರದಲ್ಲಿನ ಎಸ್‍ಎಲ್‍ವಿ ಟವರ್ ಹತ್ತಿರದ 2ನೇ ಮಹಡಿ, ನಂಬರ್-3ರ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಆಫಿಸ್ ಕಚೇರಿಯಲ್ಲಿ ನಡೆಯಲಿದೆ.

ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಈ ಕುರಿತು ಮಾಹಿತಿ ನೀಡಿದ್ದು, ಪಿಯುಸಿ ಅಥವಾ ಯಾವುದೇ ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಮತ್ತು ತಮ್ಮ ಸ್ವ-ವಿವರದೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊಬೈಲ್ ಸಂಖ್ಯೆ 9742718891, 9900827768 ಅಥವಾ 8277000619ಗೆ ಸಂಪರ್ಕಿಸಬಹುದು. ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನ: ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಇಲಾಖೆ ಕಾನೂನು ವೃತ್ತಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ವೃತ್ತಿ ತರಬೇತಿ ನೀಡಲಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು