ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಆರಂಭಿಸಲಿರುವ ಮೊತ್ತ ಮೊದಲ ವಂದೇ ಭಾರತ್ ಹೈಸ್ಪೀಡ್ ರೈಲು ಸೇವೆಗೆ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವರಾದ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದರು.
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ಬೆಂಗಳೂರು- ಮಂಗಳೂರು ವಂದೇ ಭಾರತ್ ರೈಲು ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಂತೆ ಮಂಗಳೂರು ಜಂಕ್ಷನ್ ನಲ್ಲಿ ಕೇಂದ್ರ ರೈಲ್ವೆ ಸಚಿವರು ಹಸಿರು ನಿಶಾನೆ ನೀಡುತ್ತಿದ್ದಂತೆಯೇ ರೈಲು ಬೆಂಗಳೂರು ಪ್ರಯಾಣ ಆರಂಭಿಸಿತು.
ಸ್ಮಾರ್ಟ್ ಸಿಟಿ ಮಂಗಳೂರನ್ನು ರಾಜಧಾನಿ ಬೆಂಗಳೂರಿಗೆ ಸಂಪರ್ಕಿಸುವ ವಂದೇ ಭಾರತ್ ಪ್ರಯಾಣದ ಅವಧಿಯನ್ನು ಕಡಿತಗೊಳಿಸಿ, ಆಧುನಿಕ ಹಾಗೂ ವೇಗದ ಪ್ರಯಾಣದ ಅನುಭವ ನೀಡಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ, ಕಿಶೋರ್ ಕುಮಾರ್, ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಉಪಸ್ಥಿತರಿದ್ದರು.