Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Districts Bijapur | Districts Davanagere

ಬಂಗಾಳವನ್ನು ಭಾರತದಲ್ಲೇ ಉಳಿಸಿದ್ದು ಎಸ್‌ಐಆರ್‌’ : ಯತ್ನಾಳ್

news_1791122356_0_253.webp

ದಾವಣಗೆರೆ: ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜಾರಿಯಾಗದಿದ್ದರೆ ಆ ರಾಜ್ಯವು ಭಾರತದಲ್ಲೇ ಉಳಿಯುವ ಪರಿಸ್ಥಿತಿ ಇರುತ್ತಿರಲಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್‌ ವಿಚಾರದಲ್ಲಿ ಕಾಂಗ್ರೆಸ್‌ ಮಾಡುತ್ತಿರುವ ಆರೋಪಗಳು ರಾಜಕೀಯ ಹತಾಶೆಯ ಪ್ರತಿಬಿಂಬವಾಗಿವೆ ಎಂದು ಟೀಕಿಸಿದರು. ಸಂವಿಧಾನಬದ್ಧ ಹುದ್ದೆಯಲ್ಲಿರುವವರ ವಿರುದ್ಧ ಅಸಾಂವಿಧಾನಿಕವಾಗಿ ಮಾತನಾಡುವುದು ಸರಿಯಲ್ಲ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರಂತಹ ದೇಶದ ಪ್ರಮುಖ ವ್ಯಕ್ತಿಗಳ ಬಗ್ಗೆ ಕಾಂಗ್ರೆಸ್‌ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್‌ ಕುಮಾರ್‌ ಅವರನ್ನು ಸಮರ್ಥಿಸಿಕೊಂಡ ಯತ್ನಾಳ್‌, ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಜಾರಿಯಾಗದೇ ಇದ್ದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿತ್ತು ಎಂದು ಹೇಳಿದರು. ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ ಎತ್ತುತ್ತಿರುವ ಪ್ರಶ್ನೆಗಳಿಗೆ ತಕ್ಕ ಉತ್ತರ ನೀಡಬೇಕಿದೆ ಎಂದರು.

ಇವಿಎಂ ವಿಚಾರದಲ್ಲೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಆದರೆ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಇದೇ ಇವಿಎಂ ಮೂಲಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿರುವುದನ್ನು ಮರೆಯಬಾರದು ಎಂದು ಹೇಳಿದರು. ಕಾಂಗ್ರೆಸ್‌ ಪಕ್ಷ ರಾಜಕೀಯವಾಗಿ ದುರ್ಬಲವಾಗುತ್ತಿರುವ ಕಾರಣ ಇಂತಹ ಆರೋಪಗಳನ್ನು ಮಾಡುತ್ತಿದೆ ಎಂದು ಟೀಕಿಸಿದರು.

ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಯತ್ನಾಳ್‌, ದೇಶದ ಸಾಧನೆಗಳನ್ನು ಗುರುತಿಸುವ ಬದಲು ಪ್ರತಿಯೊಂದರಲ್ಲೂ ರಾಜಕೀಯ ಹುಡುಕುವುದು ಸರಿಯಲ್ಲ ಎಂದರು. ಕಾಂಗ್ರೆಸ್‌ ನಾಯಕರು ‘ವೋಟ್‌ ಚೋರಿ’ ಎಂಬ ಆರೋಪ ಮಾಡುತ್ತಿದ್ದಾರೆ. ಆದರೆ ಚುನಾವಣಾ ವ್ಯವಸ್ಥೆಯ ಬಗ್ಗೆ ಪ್ರಶ್ನಿಸುವ ಮೊದಲು ತಮ್ಮ ಪಕ್ಷದ ಹಿಂದಿನ ಇತಿಹಾಸವನ್ನು ಅವಲೋಕಿಸಬೇಕು ಎಂದು ಹೇಳಿದರು.

ಪಕ್ಷದೊಳಗಿನ ನಾಯಕರಿಗೂ ಪರೋಕ್ಷ ಟಾಂಗ್‌ ನೀಡಿದ ಯತ್ನಾಳ್‌, ಬಿಜೆಪಿಯಲ್ಲಿ ಹಿಂದೂಗಳ ಪರ ಗಟ್ಟಿಯಾಗಿ ನಿಲ್ಲುವ ನಾಯಕರಿಗೆ ಮಾಧ್ಯಮಗಳು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದರು. ಸಾಮಾಜಿಕ ನ್ಯಾಯವನ್ನು ಕಡೆಗಣಿಸಿ ಒಬ್ಬರನ್ನೇ ಮೆರೆಸಿಕೊಂಡು ಹೋದರೆ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಎಚ್ಚರಿಸಿದರು. ಲಿಂಗಾಯತ ಸಮುದಾಯದ ಬೆಂಬಲ ತಮ್ಮೊಂದಿಗಿದೆ ಎಂದು ಹೇಳಿಕೊಳ್ಳುವ ಕೆಲ ನಾಯಕರ ನಡೆ ಬಗ್ಗೆಯೂ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ರಾಜಕೀಯ ಭವಿಷ್ಯದ ಕುರಿತು ಮಾತನಾಡಿದ ಅವರು, ಮುಂದೆ ತಾವು ಮುಖ್ಯಮಂತ್ರಿಯಾಗುವ ಕಾಲವೂ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಮ್ಮ ಹೇಳಿಕೆಗಳನ್ನು ಸದಾ ವಿವಾದಾತ್ಮಕ ಹೇಳಿಕೆಗಳೆಂದು ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿ ಕುರಿತ ಹೇಳಿಕೆಗಳ ಬಗ್ಗೆಯೂ ಪ್ರತಿಕ್ರಿಯಿಸಿದ ಯತ್ನಾಳ್‌, ಸಿದ್ದರಾಮಯ್ಯ ದೊಡ್ಡ ಸಾಮಾಜಿಕ ಹಿನ್ನೆಲೆಯಿಂದ ಬಂದ ಅನುಭವಿ ನಾಯಕ. ಅವರ ಆರ್ಥಿಕ ನೀತಿಗಳು ಉತ್ತಮವಾಗಿದ್ದವು. ಆದರೆ ಕಾಂಗ್ರೆಸ್‌ ಪಕ್ಷವೇ ಅವರ ರಾಜಕೀಯ ವ್ಯಕ್ತಿತ್ವವನ್ನು ಹಾಳು ಮಾಡಿದೆ ಎಂದು ಟೀಕಿಸಿದರು. ಸ್ವಾಭಿಮಾನವಿದ್ದರೆ ಸಿದ್ದರಾಮಯ್ಯ ಕಾಂಗ್ರೆಸ್‌ ತೊರೆಯಬೇಕು ಎಂದು ಸಲಹೆ ನೀಡಿದರು.

ತಮಿಳುನಾಡಿನಲ್ಲಿ ಹೊಸ ರಾಜಕೀಯ ಶಕ್ತಿ ರೂಪುಗೊಂಡಿರುವಂತೆ ಕರ್ನಾಟಕದಲ್ಲೂ ತಮ್ಮದೇ ರಾಜಕೀಯ ವೇದಿಕೆ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಯತ್ನಾಳ್‌ ಸುಳಿವು ನೀಡಿದರು. ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಶಕ್ತಿಯನ್ನು ಜನರು ಗುರುತಿಸಲಿದ್ದಾರೆ. ತಮ್ಮ ವಿರೋಧಿಗಳು ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವ ಪರಿಸ್ಥಿತಿ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST