ಬೆಂಗಳೂರು :
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತ್ರತ್ವದಲ್ಲಿ ಮಂಗಳವಾರ ಸೆ.26 ರಂದು ಬೆಂಗಳೂರು ಬಂದ್ ನಡೆಸಲು ವಿವಿಧ ಸಂಘಟನೆಗಳು ಕರೆ ನೀಡಿವೆ.
ಇದರಿಂದ ರಾಜಧಾನಿಯಲ್ಲಿ ಹಲವು ಸೇವೆಗಳು ವ್ಯತ್ಯಯವಾಗುವ ಸಾಧ್ಯತೆ ಇದೆ.
ಶುಕ್ರವಾರ ಕರುನಾಡು ಬಂದ್ ?
ಇದರ ಬೆನ್ನಲ್ಲೇ ಕನ್ನಡ ಸಂಘಟನೆಗಳು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ನಡೆಸಲು ಸಿದ್ಧತೆ ನಡೆಸಿವೆ. ಬೆಂಗಳೂರು ಜೊತೆಗೆ ಕರ್ನಾಟಕ ಬಂದ್ ಮಾಡಿದರೆ ಅದರ ಪರಿಣಾಮ ಹೆಚ್ಚಿರುತ್ತದೆ. ಆದ್ದರಿಂದ ರಾಜ್ಯ ಬಂದ್ ಮಾಡಲು ಕರ್ನಾಟಕ ಸಂಘಟನೆಗಳು ನಿರ್ಧರಿಸಿದ್ದು ಸೆಪ್ಟೆಂಬರ್ 29ರ ಶುಕ್ರವಾರ ಬಹುತೇಕ ಬಂದ್ ಕರೆ ನೀಡಲು ಸಿದ್ಧತೆ ನಡೆಸುತ್ತಿವೆ. ಈ ಬಗ್ಗೆ ಸೋಮವಾರ ಬೆಳಗ್ಗೆ ಬೆಂಗಳೂರಿನಲ್ಲಿ ಸಂಘಟನೆಗಳು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.