LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಳಿ ಮೇಲೆ ಗುಡ್ಡ ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಮಂಗಳೂರು: ಭಾರಿ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದು, ಬೆಂಗಳೂರಿನಿಂದ ಕರಾವಳಿಗೆ ಬರುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಡೆಕುಮರಿ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ.

ಕಿಲೋಮೀಟರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರಿ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.



ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ ದೂರಕ್ಕೆ ಬಂದು ನಿಂತಿದ್ದು, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.‌‌ ರೈಲು ಸ್ಥಗಿತಗೊಂಡಿದ್ದರಿಂದ ನೂರಾರು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಕಾಲ ಕಳೆಯುತ್ತಿದ್ದು, ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ತೆರಳುತ್ತಿದ್ದಾರೆ. ರೈಲ್ವೆ ಹಳಿ ಮೇಲೆ ಬಿದ್ದಿರುವ ಮಣ್ಣನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026