ಬೆಂ.ಗ್ರಾ.ಜಿಲ್ಲೆ : ಬೇಸಿಗೆ ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿಗೆ ಕರೆಮಾಡಿ
ಬೆಂ.ಗ್ರಾ.ಜಿಲ್ಲೆ: ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಪರ್ಕಿಸಿ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್. ಅನುರಾಧ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗುವ ಗ್ರಾಮಗಳಲ್ಲಿ ತುರ್ತಾಗಿ ಕುಡಿಯುವ ನೀರನ್ನು ಒದಗಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 8:00 ಗಂಟೆಯವರೆಗೆ ವಾರದ 7 ದಿನಗಳಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಸಾರ್ವಜನಿಕರು (ದೂರವಾಣಿ ಸಂಖ್ಯೆ 080-22221050) ಕರೆ ಮಾಡಿ ತಿಳಿಸಬಹುದಾಗಿದ್ದು, ಕಂಟ್ರೋಲ್ ರೂಂನಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಯನ್ನು ಪರಿಹರಿಸಲು ಕ್ರಮವಹಿಸಲಿದ್ದಾರೆ.
ಮುಂದಿನ ಮೂರು ತಿಂಗಳಲ್ಲಿ ಜಿಲ್ಲೆಯ ಸುಮಾರು 101 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಅಂತಹ ಪರಿಸ್ಥಿತಿಯಲ್ಲಿ ಖಾಸಗಿ ಬೋರ್ವೆಲ್ಗಳು ಹಾಗೂ ಖಾಸಗಿ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಿ, ಶುದ್ಧತೆ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.