LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಶಿಕ್ಷಕ ಆರ್.ಪಿ‌.ಈಶಪ್ಪರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಸಿರುಗುಪ್ಪ.ಸೆ.೦೫. ಪ್ರತಿನಿತ್ಯ ಒಂದಿಲ್ಲೊಂದು ವಿನೂತನ ಕಲಿಕಾ ಚಟುವಟಿಕೆಗಳ ಮೂಲಕವೇ ವಿದ್ಯಾರ್ಥಿಗಳ ಮತ್ತು ತಾಲೂಕಿನ ಶಿಕ್ಷಣ ಇಲಾಖೆಯ ಗಮನ ಸೆಳೆದಿರುವ ಆರ್.ಪಿ‌.ಈಶಪ್ಪ ಬಿ.ಜಿ.ದಿನ್ನೆಯವರು ೨೦೨೫-೨೬ನೇ ಸಾಲಿನ 'ಕ್ಲಸ್ಟರ್ ಹಂತದ ಉತ್ತಮ ಶಿಕ್ಷಕ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕುಡುದರಹಾಳ್ ಕ್ಲಸ್ಟರ್ ವ್ಯಾಪ್ತಿಯ ಭೈರಗಾಮದಿನ್ನೆ ಸ.ಕಿ.ಪ್ರಾ.ಶಾಲೆಯ ಅತಿಥಿ ಶಿಕ್ಷಕರಲ್ಲದೆ ರಂಗ ಪದವೀಧರರಾಗಿರುವ ಇವರು ಮೂಲತಃ ಭೈರಗಾಮದಿನ್ನೆ ಗ್ರಾಮದ ಆರ್.ಪ್ರಕಾಶಗೌಡ ಮತ್ತು ಆರ್.ಅನ್ನಪೂರ್ಣ ದಂಪತಿಗಳ ಮಗನಾಗಿ ೦೧ ಜನವರಿ ೧೯೯೩ರಲ್ಲಿ ಜನಿಸಿದ್ದಾರೆ. ಎಂ.ಎ ಡ್ರಾಮಾ ಮಾಡಿರುವ ಇವರು ಶಾಲಾ ಪಠ್ಯ ವಿಷಯಗಳನ್ನು ನಾಟಕ, ನೃತ್ಯ, ಸಂಗೀತ, ಚಿತ್ರಕಲೆ ಚಟುವಟಿಕೆಗಳ ಮೂಲಕ ಕಲಿಸುತ್ತಾ ಶಾಲಾ ಪ್ರವೇಶಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸಿದ್ದಾರೆ. ಅಲ್ಲದೆ ಇವರ ಗುಣಮಟ್ಟದ ಕಲಿಕಾ ವಿಧಾನಗಳಿಗೆ ಮನಸೋತ ಊರಿನ ಜನರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗೆ ಸೇರಿಸುವಂತೆ ಮೋಡಿ ಮಾಡಿದ್ದಾರೆ. ಅಭಿನಯ, ನೃತ್ಯ ಹಾಗೂ ಬೋಧನೆಯಲ್ಲಿನ ಇವರ ಸೃಜನಶೀಲತೆಯನ್ನು ಗುರುತಿಸಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣ ಇಲಾಖೆಯ ಬಿ.ಇ.ಓ ಹೆಚ್.ಗುರ್ರಪ್ಪ, ಬಿ.ಆರ್.ಪಿ ತಮ್ಮನಗೌಡ ಪಾಟೀಲ್, ಸಿ.ಆರ್.ಪಿ ಮಲ್ಲಿಕಾರ್ಜುನ, ಮುಖ್ಯೋಪಾಧ್ಯಾಯ ದೊಡ್ಡಪ್ಪ ಕೋರೆ, ರೂಂ ಟು ರೀಡ್ ಸಂಚಾಲಕ ಸಂತೋಷ್ ಮತ್ತಿತರರು ಕುಡುದರಹಾಳಿನಲ್ಲಿ ಇಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 'ಕ್ಲಸ್ಟರ್ ಹಂತದ ಉತ್ತಮ ಶಿಕ್ಷಕ ಪ್ರಶಸ್ತಿ' ನೀಡಿ ಗೌರವಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು