LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೂತ್ರಪಿಂಡ ರೋಗಕ್ಕೆ ಎನ್ ಯುನಲ್ಲಿ ಉತ್ತಮ ಚಿಕಿತ್ಸೆ

ಶಿವಮೊಗ್ಗ,ಸೆ.5: ಮಲೆನಾಡಿನಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಎನ್‌ಯು ಸಮೂಹ ಸಂಸ್ಥೆಯ ಆಸ್ಪತ್ರೆಯು ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಇಲಾಖೆಯ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಅವರು ಗುರುವಾರ ಮಾಚೇನಹಳ್ಳಿಯಲ್ಲಿರುವ ಎನ್‌ಯು ಆಸ್ಪತ್ರೆಯಲ್ಲಿ ಪ್ರಥಮ ಕಿಡ್ನಿ ಟ್ರಾನ್ಸ್‌ಪ್ಲೆಂಟ್‌ಟೇಷನ್ ಯಶಸ್ವಿ ಶಸ್ತ್ರ ಚಿಕಿತ್ಸೆಯ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಿವಮೊಗ್ಗದ ಜನರು ಕಿಡ್ನಿ ಟ್ರಾನ್ಸ್‌ಪ್ಲೆಂಟ್‌ಟೇಷನ್ ಶಸ್ತ್ರ ಚಿಕಿತ್ಸೆಗೆ ದೂರದ ಬೆಂಗಳೂರು, ಮಣಿಪಾಲ್‌ನಂತರ ನಗರಕ್ಕೆ ಹೋಗಬೇಕಾಗಿತ್ತು. ಆದರೆ ಈ ಆಸ್ಪತ್ರೆಯು ಇಲ್ಲಿ ಸ್ಥಾಪನೆಯಾಗಿದ್ದರಿಂದ ಈ ಭಾಗದ ಜನರಿಗೆ ಅನುಕೂಲಕರವಾಗಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಕಿಡ್ನಿ ಟ್ರಾನ್ಸ್‌ಪ್ಲೆಂಟ್‌ಟೇಷನ್ ಬಗ್ಗೆ ಅವರಲ್ಲಿ ಆತಂಕ ಹೆಚ್ಚಾಗುತ್ತಿದೆ. ಎನ್‌ಯು ಆಸ್ಪತ್ರೆಯು ಆ ಎಲ್ಲಾ ಆತಂಕಗಳನ್ನು ದೂರು ಮಾಡುತ್ತಿದೆ ಎಂದು ಅವರು ಹೇಳಿದರು.

ನಾಡಿನ ಹಲವಾರು ಕುಟುಂಬಗಳ ಬದುಕಿಗೆ ಆಶ್ರಯ ನೀಡುತ್ತಿರುವ ಈ ಆಸ್ಪತ್ರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡುವಂತಾಗಲಿ ಎಂದು ಅವರು ಆಶಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮೂತ್ರಪಿಂಡ ಅಂಗಾಂಗ ಕಸಿ ತಜ್ಞ ಡಾ|| ಪ್ರವೀಣ್ ಮಾಳವದೆ ಮಾತನಾಡಿ, ೨೦೨೦ರಲ್ಲಿ ಶಿವಮೊಗ್ಗದಲ್ಲಿ ಎನ್‌ಯು ಆಸ್ಪತ್ರೆಯ ಶಾಖೆ ಆರಂಭವಾಗಿದೆ. ೨೦೨೩ ರ ಏಪಿಲ್‌ನಲ್ಲಿ ಪ್ರಥಮ ಕಿಡ್ನಿ ಟ್ರಾನ್ಸ್‌ಪ್ಲೆಂಟ್‌ಟೇಷನ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮೂತ್ರಪಿಂಡ ದಾನ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು.ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯ ನಾಯ್ಕ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಶಾರದ ಅಪ್ಪಾಜಿ ಗೌಡ, ಡಾ|| ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST