LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವದ ಸಂಭ್ರಮ ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆ ಯಿಂದ ಕೂಡಿದೆ- ಡಾ. ಶ್ರೀಕಂಠ ಕೂಡಿಗೆ

ಶಿವಮೊಗ್ಗ, ಫೆಬ್ರವರಿ 07 ): ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆ ಯಿಂದ ಕೂಡಿದ್ದು ಈ ಹೊತ್ತಿಗು ಕೂಡ ತನ್ನ ಛಾಪನ್ನ ಉಳಿಸಿಕೊಂಡು ಬಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವರಾದ ಡಾ. ಶ್ರೀಕಂಠ ಕೂಡಿಗೆ ಅವರು ಹೇಳಿದರು.
ಅವರು ಆಕಾಶವಾಣಿ ಭದ್ರಾವತಿ ಕೇಂದ್ರಕ್ಕೆ 60ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಆಕಾಶವಾಣಿ ಆವರಣದಲ್ಲಿ ಹಮ್ಮಿಕೊಂಡ ವಜ್ರಮಹೋತ್ಸದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. 1965ರಲ್ಲಿ ಆರಂಭಗೊಂಡ ಆಕಾಶವಾಣಿ ಅಂದಿನಿAದಲೂ ಇಂದಿನವರೆಗೆ ಹಲವು ನಿರ್ದೇಶಕರು ಹಾಗು ಸಿಬ್ಬಂದಿ ತಮ್ಮದೆ ಆದ ಕೊಡುಗೆಯನ್ನ ನೀಡಿದ್ದಾರೆ ಎಂದು ಹೇಳಿದರು. ಎಸ್.ಆರ್.ಭಟ್ ಅವರ ಕಲ್ಪನೆಯ ಹಲವು ವಿಶೇಷ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇಶವಿದೇಶಗಳಲ್ಲಿ ಭದ್ರಾವತಿ ಆಕಾಶವಾಣಿ ಕಾರ್ಯಕ್ರಮಗಳ ಕಂಪು ಪಸರಿಸಿವೆ ಎಂದರು.
ನಂತರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಕೆ.ಸಿ.ಶಶಿಧರ್ ರವರು ಮಾತನಾಡಿ ದೇಶದಲ್ಲಿ ಕೃಷಿಗೆ ಸಂಬಂಧಸಿದಂತೆ ರೈತಬಂಧುಗಳಿಗೆ ಉಪಯುಕ್ತ ಮಾಹಿತಿಯನ್ನ ನೀಡಿ ಸ್ವಾವಲಂಭನೆ ಬದುಕಿಗೆ ಬಹುದೊಡ್ಡ ಕೊಡುಗೆ ಆಕಾಶವಾಣಿ ನೀಡಿದೆ ಎಂದರು.
ಕುವೆಂಪು ವಿಶ್ವವಿದ್ಯಾಲಯದ ಉಪಕುಲಸಚಿವರಾದ ಡಾ.ಕೆ.ಆರ್.ಮಂಜುನಾಥ್ ಅವರು ಮಾತನಾಡಿ ಎಲೆಮರೆಕಾಯಿಯಂತಿರುವ ಎಷ್ಟೋ ಪ್ರತಿಭೆಗಳಿಗೆ ಆಕಾಶವಾಣಿಯು ವೇದಿಕೆಯನ್ನು ಕೊಟ್ಟು ರಾಜ್ಯ ಮತ್ತು ರಾಷ್ಠçಮಟ್ಟದಲ್ಲಿ ಗುರುತಿಸುವುಕೊಳ್ಳುವದರಲ್ಲಿ ಬಹು ದೊಡ್ಡ ಕೊಡುಗೆಯನ್ನು ನೀಡಿದೆ ಎಂದರು.
ಇನ್ನು ಕೆಲವೇ ದಿನಗಳಲ್ಲಿ ಆಕಾಶವಾಣಿಯ ಪ್ರಸಾರಣ ಸಾಮರ್ಥ್ಯ, ಶಿವಮೊಗ್ಗದಲ್ಲಿ ಸ್ಥಾಪನೆಯಾಗುತ್ತಿರುವ 10ಕಿಲೊವ್ಯಾಟ್ ಸಾಮರ್ಥ್ಯದ ಎಫ್ ಎಂ ಟ್ರಾನ್ಸ್ಮಿಟ್ಟರ್ ನಿಂದಾಗಿ ಹೆಚ್ಚು ವ್ಯಾಪ್ತಿಯನ್ನು ತಲುಪಲು ಅವಿರತವಾಗಿ ಶ್ರಮಿಸುತ್ತಿರುವ ಶಿವಮೊಗ್ಗದ ಸಂಸದರಾದ ಬಿ.ವೈ.ರಾಘವೇಂದ್ರರವರನ್ನು ನೆನಪಿಸಿಕೊಳ್ಳುತ್ತ, ಅವರ ಪಾತ್ರ ದೊಡ್ಡದು ಎಂದರು. ಈ ಹಂತದಲ್ಲಿ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಆಕಾಶವಾಣಿ ಭದ್ರಾವತಿ ಮತ್ತು ಚಿತ್ರದುರ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಸುಬ್ರಾಯ ಆರ್ ಭಟ್ ರವರು ತಿಳಿಸಿದರು.

ವಿಶೇಷ ಆಹ್ವಾನಿತರಾಗಿ ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಡಾ. ನೆಲ್ಲಿಕಟ್ಟೆ ಸಿದ್ದೇಶ್, ಶಿವಮೊಗ್ಗದ ಛೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ಬಿ.ಗೋಪಿನಾಥ್, ಪಿ.ಇ.ಎಸ್ ಸಮೂಹ ಸಂಸ್ಥೆಯ ಮುಖ್ಯ ಸಂಯೋಜಕರಾದ ಡಾ. ನಾಗರಾಜ್ ಆರ್, ಶಿವಮೊಗ್ಗದ ಐ.ಎಂ.ಎ ಕಾರ್ಯದರ್ಶಿಗಳಾದ ಹಾಗು ಸುಬ್ಬಯ್ಯ ಸಮೂಹ ಸಂಸ್ಥೆಯ ಸಿ.ಇ.ಒ ಡಾ. ವಿನಯ ಶ್ರೀನಿವಾಸ್ ಉಪಸ್ಥಿತರಿದ್ದರು. ನಂತರ ಕಥಾ ಸ್ವರ್ಧೆಯಲ್ಲಿ ವಿಜೇತರಾದ ದೀಪ್ತಿ ಭದ್ರಾವತಿ, ಶ್ರೇಯ ಕೆ ಎಂ ಹಾಗೂ ಸಂತೆಬೆನ್ನೂರು ಫೈಜ್‌ನಟ್ರಾಜ್ ಮತ್ತು ಪಾಕಸ್ಪರ್ಧೆಯಲ್ಲಿ ವಿಜೇತರಾದ ಗಿರಿಜಾ ಹೆಗಡೆ, ಎಂ.ಎನ್.ಸುಶೀಲ, ಡಾ. ಮೈತ್ರೇಯಿ ಅವರಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕರಾದ ಬಿ.ಎಲ್.ಚಾಂದ್‌ವಾನಿ, ಮತ್ತು ಕೆ.ಎಸ್. ಸುರೇಶ್, ಮುಖ್ಯಮಹಾಪ್ರಭಂಧಕರು ಸ್ತಾವರ, ಎಲ್.ಪ್ರವೀಣ್‌ಕುಮಾರ್ ಮಹಾಪ್ರಭಂಧಕರು, ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಮಾನವ ಸಂಪನ್ಮೂಲ, ಮುತ್ತಣ್ಣ ಸುಬ್ಬರಾವ್, ಮಹಾಪ್ರಭಂಧಕರು, ಪರಿಸರ ವಿಭಾಗ ಹಾಗು ವಿಕಾಸ್ ಬಸೀರ್ ಸಹಾಯಕ ಮಹಾಪ್ರಭಂಧಕರು ಮತ್ತು ಇತರ ಸಿಬ್ಬಂದಿ ವರ್ಗದವರು, 60ವರ್ಷದ ಸವಿನೆನಪಿಗೆ 60 ಸಸಿಗಳನ್ನು ವಿತರಿಸಿದರು. ಆಕಾಶವಾಣಿ ಕೇಂದ್ರದಲ್ಲಿ ನಿವೃತ್ತ ಹೊಂದಿದವರಿಗೆ ಮತ್ತು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂಧಿವರ್ಗದವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ರಾಜ್ಯದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ ಕೇಳುಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಕಾರ್ಯಕ್ರಮವನ್ನು ಶೋಭ ಮತ್ತು ತಂಡದವರಿಂದ ಸ್ವಾಗತಗೀತೆಯೊಂದಿಗೆ ಆರಂಭಿಸಿದರೆ ಕಾರ್ಯಕ್ರಮ ಅಧಿಕಾರಿ ಎಸ್.ಎಲ್.ರಮೇಶ್‌ಪ್ರಸಾದ್ ಅವರು ಎಲ್ಲರನ್ನು ಸ್ವಾಗತಿಸಿದರು. ಡಾ.ಗಣೇಶ್ ಆರ್ ಕೆಂಚನಾಳ ಅವರು ಪ್ರಾಸ್ತವಿಕ ನುಡಿಗಳನ್ನಾಡಿದರೆ ಶಕೀಲ್ ಅಹ್ಮದ್ ಮತ್ತು ಮೀನ ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಕಾಶವಾಣಿಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು