Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸ್ವಾರ್ಥ ರಾಜಕಾರಣಕ್ಕೆ ಜಗದೀಶ್ ಶೆಟ್ಟರ್ ಸ್ಪಷ್ಟ ನಿದರ್ಶನ:ಭಗವಂತ್ ಖೂಬಾ

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.17: ಸ್ವ್ವಾರ್ಥಕ್ಕಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಹೊರಟಿರುವ ಜಗದೀಶ್ ಶೆಟ್ಟರ್ ಅವರಿಗೆ ಲಕ್ಷಾಂತರ ಬಿಜೆಪಿ ಕಾರ್ಯಕರ್ತರ ಶಾಪ ತಟ್ಟಲಿದ್ದು, ಇದು ಮೇ 13ರಂದು ಚುನಾವಣಾ ಫಲಿತಾಂಶದಲ್ಲಿ ಅದು ವ್ಯಕ್ತವಾಗುತ್ತದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರು ಹೇಳಿದರು.

ಬೆಂಗಳೂರಿನ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಪಕ್ಷ ಉನ್ನತ ಸ್ಥಾನ ನೀಡಿರುವುದಕ್ಕೆ ಕೇಂದ್ರ ಸಚಿವ ಸ್ಥಾನದಲ್ಲಿರುವ ತಾವೇ ನಿದರ್ಶನ. ಶೆಟ್ಟರ್ ಅವರಿಗೆ ಕಳೆದ ನಾಲ್ಕು ದಶಕಗಳಿಂದ ಪಕ್ಷದ ಕಾರ್ಯಕರ್ತರು ಸರ್ಕಾರದಲ್ಲಿ ಉನ್ನತ ಸ್ಥಾನಗಳನ್ನು ನೀಡಿದ್ದರು. ಇದೀಗ ಪಕ್ಷಕ್ಕೆ ದ್ರೋಹ ಬಗೆದು ಕಾರ್ಯಕರ್ತರನ್ನು ದೂರ ಮಾಡಿ ಬೇರೆ ಪಕ್ಷ ಸೇರಲು ಹೊರಟ್ಟಿದ್ದಾರೆ ಎಂದು ಆಕ್ಷೇಪಿಸಿದರು.

ಸ್ವಾರ್ಥ ರಾಜಕಾರಣಕ್ಕೆ ಶೆಟ್ಟರ್ ಸಾಕ್ಷಿಯಾಗಿದ್ದಾರೆ. ಬಿಜೆಪಿ, ವಿಶ್ವದಲ್ಲೇ ಅತಿದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷದ ತತ್ವ ಸಿದ್ಧಾಂತಗಳನ್ನು ನಂಬಿ ಕೋಟಿಗಟ್ಟಲೆ ಕಾರ್ಯಕರ್ತರು ತಮ್ಮ ಜೀವನ, ಕುಟುಂಬಗಳನ್ನು ಮರೆತು ದೇಶ ಮೊದಲು, ನಂತರ ಪಕ್ಷ, ಕೊನೆಯದಾಗಿ ತಾನು ಎಂದು ಶ್ರಮಿಸಿ ಪಕ್ಷವನ್ನು ಬಲಿಷ್ಠವಾಗಿಸಿದ್ದಾರೆ. ಶೆಟ್ಟರ್ ಸಹ ದೇಶ ಮೊದಲು ಎಂದು ರಾಜಕೀಯದಲ್ಲಿದ್ದು ಅನೇಕ ಅವಕಾಶಗಳನ್ನೂ ಪಡೆದಿದ್ದಾರೆ. ಇದೀಗ, ಯುವಕರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕ್ಷೇತ್ರ ಬಿಟ್ಟುಕೊಡುವ ವಿಚಾರ ಬಂದಾಗ ದೇಶ ಮೊದಲು ಎಂಬುದನ್ನು ಮರೆತು ಸ್ವಾರ್ಥ ತೋರಿದ್ದಾರೆ ಎಂದು ಟೀಕಿಸಿದರು.

30 ವರ್ಷ ಅವಧಿಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಶೆಟ್ಟರ್ ಅವರು ದೇಶ ಸೇವೆಗೆ ನಿಲ್ಲಬಹುದಿತ್ತು. ಕೇವಲ ಶಾಸಕ ಸ್ಥಾನಕ್ಕಾಗಿ ದೇಶ ಸೇವೆಯನ್ನು ಮರೆತು ತಮ್ಮ ಸಣ್ಣತನವನ್ನು ರಾಜ್ಯದ ಜನತೆಗೆ ತೋರಿದ್ದಾರೆ. ಸ್ವಾರ್ಥಕ್ಕೋಸ್ಕರ ಕಾರ್ಯಕರ್ತರನ್ನು ಬಳಸಿಕೊಂಡಿದ್ದಾರೆ. ಅವರ ಮಾಡಿದ ದ್ರೋಹಕ್ಕೆ ಕಾರ್ಯಕರ್ತರು, ಜನರು ಎಂದೂ ಕ್ಷಮಿಸುವುದಿಲ್ಲ. ಅಭಿವೃದ್ಧಿ ವಿರೋಧಿ, ಸಮಾಜ ಒಡೆಯುವ, ತುಷ್ಟೀಕರಣ ಮಾಡುವ ಕಾಂಗ್ರೆಸ್ ಪಕ್ಷವನ್ನು ಶೆಟ್ಟರ್ ಸೇರುತ್ತಿದ್ದಾರೆ ಎಂದು ಹೇಳಿದರು.

ಲಿಂಗಾಯತರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಲಿಂಗಾಯತ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಿದೆ. ಪ್ರಬುದ್ಧತೆ ಹೊಂದಿರುವ ಲಿಂಗಾಯತ ಸಮಾಜ ಸೇರಿದಂತೆ ಎಲ್ಲ ವರ್ಗಗಳು ಬಿಜೆಪಿಯೊಂದಿಗೆ ಇವೆ. ನರೇಂದ್ರ ಮೋದಿಜಿ ಅವರ ನೇತೃತ್ವ ಮತ್ತು ಬಿಜೆಪಿ ತತ್ವ-ಸಿದ್ಧಾಂತಗಳ ಮೇಲೆ ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ದೊರೆಯಲಿದ್ದು, ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಭಗವಂತ ಖೂಬಾ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ