Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ರೋಣದಲ್ಲಿ ಭಗವಂತ್‌ ಮಾನ್‌ ಭರ್ಜರಿ ರೋಡ್‌ ಶೋ





ಸುದ್ದಿಮೂಲ ವಾರ್ತೆ

ಗದಗ, ಏ.18: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ರೋಣದಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಭಗವಂತ್‌ ಮಾನ್‌, ನಂತರ ರೋಣ ನಗರಕ್ಕೆ ತೆರಳಿ ಅಲ್ಲಿನ ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿ ಆನೇಕಲ್‌ ದೊಡ್ಡಯ್ಯ ಜೊತೆ ಬೃಹತ್‌ ರೋಡ್‌ ಶೋನಲ್ಲಿ ಭಾಗವಹಿಸಿದರು.

ಮೆರವಣಿಗೆಯಲ್ಲಿ ಮಾತನಾಡಿದ ಸಿಎಂ ಭಗವಂತ್‌ ಮಾನ್‌ “ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಭ್ರಷ್ಟ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಆ ಪಕ್ಷಗಳಿಂದ ಅಭಿವೃದ್ಧಿ ಸಾಧ್ಯವಿಲ್ಲವೆಂದು ಜನರಿಗೆ ಮನವರಿಕೆ ಆಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಇಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ಕಾರ ರಚನೆಯಾಗಬೇಕು. ಜನರ ಹಣವನ್ನು ಲೂಟಿ ಮಾಡುವವರ ಬದಲು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಆ ಹಣವನ್ನು ಜನರ ಜೀವನಮಟ್ಟ ಸುಧಾರಣೆಗೆ ಬಳಸುವ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬರಬೇಕು. ದೆಹಲಿ ಹಾಗೂ ಪಂಜಾಬ್‌ನಲ್ಲಿನ ಶಿಕ್ಷಣ ಹಾಗೂ ಆರೋಗ್ಯ ಕ್ರಾಂತಿ ಕರ್ನಾಟಕದಲ್ಲೂ ಆಗಬೇಕು” ಎಂದು ಭಗವಂತ್‌ ಮಾನ್ ಹೇಳಿದರು.

ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸೇರಿದಂತೆ ಅನೇಕ ನಾಯಕರುಗಳು ಈ ಸಂದರ್ಭದಲ್ಲಿ ಹಾಜರಿದ್ದರು

ಏಪ್ರಿಲ್‌ 19ರ ಬುಧವಾರಂದು ಕೂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಗವಂತ್‌ ಮಾನ್‌ ಪ್ರವಾಸ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರೋಡ್‌ ಶೋ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆಯ ತೆರದಾಳಿನಲ್ಲಿ ರೋಡ್‌ ಶೋ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 3 ಗಂಟೆಗೆ ತೆರದಾಳಿನಲ್ಲಿ ನಡೆಯುವ ರೈತರ ರ‍್ಯಾಲಿಯಲ್ಲೂ ಭಗವಂತ್‌ ಮಾನ್‌ ಉಪಸ್ಥಿತರಿರುತ್ತಾರೆ.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ