Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್, ಮಂಜುನಾಥ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್, ಶಿವಮೊಗ್ಗದ ಮಂಜುನಾಥ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು, ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಶ್ರದ್ಧಾಂಜಲಿ ಅರ್ಪಿಸಿದರು.

ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ಸಿದ್ದರಾಮಯ್ಯ ಅವರು ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅಂತಿಮ ನಮನ ಸಲ್ಲಿಸಿದರು.

ಸಂಸದರಾದ ಪಿ.ಸಿ ಮೋಹನ್‌, ಮಾಜಿ ಸಚಿವರಾದ ಮುನಿರತ್ನ, ಶಾಸಕರಾದ  ಹರೀಶ್‌ಪೂಂಜಾ, ಮಾಜಿ ವಿಧಾನ ಪರಿಷತ್‌ಸದಸ್ಯರಾದ ತುಳಸಿ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಶಿವಮೊಗ್ಗದ  ಮಂಜುನಾಥ್‌ರಾವ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ನಮನಗಳನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ, ಪರಿಷತ್‌ಸದಸ್ಯರಾದ ಅರುಣ್ ಅವರು ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಕಾಶ್ಮೀರದ ಪಹಲ್ಗಾಮ್‌ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಾದ  ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮೃತ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ತಿಳಿಸಿ ಅಂತಿಮ ನಮನ ಸಲ್ಲಿಸಿದರು.


ಬೆಂಗಳೂರಿನ ಮತ್ತಿಕೆರೆಯ ಭರತ್‌ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.


ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ಭೂಷಣ್‌ಅವರ ಮನೆಗೆ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಶಾಸಕ ಮುನಿರತ್ನ ಅವರು ತೆರಳಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ
, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ