Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಹಂದಿಗೂಡದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ: ಬಡ ಕುಟುಂಬಗಳಿಗೆ ಅನುಕೂಲ

ಸಂಕೇಶ್ವರ: ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮದುವೆ, ಶುಭ ಸಮಾರಂಭಗಳಿಗೆ ಅದರಲ್ಲೂ ಬಡಕುಟುಂಬಗಳಿಗೆ ಅನುಕೂಲವಾಗುವಂತೆ ಸಮುದಾಯ ಭವನ ನಿರ್ಮಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಸಮೀಪದ ಹಂದಿಗೂಡ ಗ್ರಾಮದಲ್ಲಿ ಮೂರುಸಾವಿರ ಮಠದ ಶಾಖಾ ಮಠ ಲಿಂಗವರ್ತಿ ವತಿಯಿಂದ ನಿರ್ಮಿಸಲಾಗುತ್ತಿರುವ ಸಮುದಾಯ ಭವನಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮಸ್ಥರ ದೇಣಿಗೆ, ಮಠದ ನೆರವು ಹಾಗೂ ಶಾಸಕರ 10 ಲಕ್ಷ ರೂ. ಅನುದಾನ ಸೇರಿದಂತೆ ವಿವಿಧ ಮೂಲಗಳಿಂದ ಸಂಗ್ರಹವಾಗುತ್ತಿರುವ ಸಂಪನ್ಮೂಲದಲ್ಲಿ ಭವನ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಗ್ರಾಮಸ್ಥರ ಮಂಗಲ ಕಾರ್ಯಗಳು ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳಿಗೆ ಈ ಭವನ ಉಪಯುಕ್ತವಾಗಬೇಕು. ಎಲ್ಲರ ಸಹಭಾಗಿತ್ವದಲ್ಲಿ ರೂಪುಗೊಳ್ಳುತ್ತಿರುವ ಕಟ್ಟಡವು ಗ್ರಾಮದ ಒಗ್ಗಟ್ಟು ಮತ್ತು ಸಹಕಾರದ ಪ್ರತೀಕವಾಗಲಿ ಎಂದು ಆಶಿಸಿದರು.
ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕ ವಿನಯ ಪಾಟೀಲ ಮಾತನಾಡಿ, ಹಲವು ವರ್ಷಗಳ ಹಿಂದೆ ಶ್ರೀಮಠದ ಜಮೀನು ಮಾರಾಟದಿಂದ ದೊರೆತ 4 ಲಕ್ಷ ರೂ. ಮೊತ್ತವು ಇಂದು 15 ಲಕ್ಷವಾಗಿ ಬೆಳೆದು ಸಮುದಾಯ ಭವನ ನಿರ್ಮಾಣಕ್ಕೆ ಬಳಕೆಯಾಗುತ್ತಿರುವುದು ವಿಶೇಷ. ಯಾವುದೇ ರಾಜಕೀಯ ಭೇದಭಾವಕ್ಕೆ ಅವಕಾಶ ನೀಡದೆ ಗ್ರಾಮಸ್ಥರು ಒಗ್ಗಟ್ಟಿನಿಂದ ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ಬಲ ದೊರೆಯುತ್ತದೆ. ಗ್ರಾಮದ ಜನರ ನಡುವಿನ ಸಹಕಾರ ಹಾಗೂ ಹೊಂದಾಣಿಕೆ ಮುಂದುವರಿಯಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಘಟಪ್ರಭಾ ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿ ಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿ, ಗ್ರಾಮದ ಪ್ರಗತಿಗೆ ಸಾಮರಸ್ಯದ ಬದುಕು ಅಡಿಪಾಯವಾಗಿದೆ. ಸಮುದಾಯ ಭವನವು ಕೇವಲ ಕಾರ್ಯಕ್ರಮಗಳ ಕೇಂದ್ರವಾಗದೆ, ಗ್ರಾಮಸ್ಥರನ್ನು ಒಗ್ಗೂಡಿಸುವ ವೇದಿಕೆಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಹುಕ್ಕೇರಿ ವಿರಕ್ತಮಠದ ಶಿವಬಸವ ಸ್ವಾಮೀಜಿ, ಯಮಕನಮರಡಿ ಮುಖಂಡರಾದ ಮಾರುತಿ ಅಷ್ಟಗಿ, ಪ್ರಶಾಂತ ಪಾಟೀಲ, ಮಹೇಶ ವಾಲಿ, ಶ್ರೀಶೈಲ ಹಿರೇಮಠ, ಉದಯ ಪಾಟೀಲ, ಕೆಂಪ್ಪಣ್ಣಾ ದೊಡಭಂಗಿ, ಮಲ್ಲಪ್ಪಾ ಚೌಗಲಾ, ಅಪ್ಪಾ ಚೌಗಲಾ, ಅಶೋಕ ಕಂಕಣವಾಡಿ, ನಿಂಗಪ್ಪಾ ತೋರವತ, ಸತ್ತೆಪ್ಪಾ ಕಂಕಣವಾಡಿ, ಬಾಳಪ್ಪ ಮಂಜರಗಿ, ಗುತ್ತಿಗೆದಾರ ಮಲ್ಲಪ್ಪ ಅಂಕಲೆ ಸೇರಿದಂತೆ ಗ್ರಾಮಸ್ಥರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ