Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

BIG BREAKING ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದು ಇತಿಹಾಸ ಬರೆದ ಭಾರತ

ದುಬೈ : ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ರವಿವಾರ ರಾತ್ರಿ ನಡೆದ ಏಷ್ಯಾ ಕಪ್ ಟಿ20 ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ 19.1 ಓವರ್ ಗಳಲ್ಲಿ 146 ರನ್ ಮಾಡಿ ಅಲೌಟ್ ಅಯಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಭಾರತ 19.4 ಓವರ್ ಗಳಲ್ಲಿ ಕೇವಲ ಐದು ವಿಕೆಟ್ ಕಳೆದುಕೊಂಡು 150 ರನ್ ಗಳಿಸಿ ಜಯಭೇರಿ ಬಾರಿಸಿತು. ಭಾರತದ ಪರವಾಗಿ ತಿಲಕ್ ವರ್ಮ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ನೀಡಿ ಭಾರತದ ಗೆಲುವಿನ ರೂವಾರಿ ಎನಿಸಿಕೊಂಡರು.

ಭಾರತ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲಿಕಿತ್ತು. ಅಭಿಶೇಕ್ ಶರ್ಮಾ ಕೇವಲ 5 ರನ್, ನಾಯಕ ಸೂರ್ಯಕುಮಾರ್ ಯಾದವ್ 1, ಶುಬಮನ್ ಗಿಲ್ 12 ರನ್ ಸಿಡಿಸಿ ಔಟಾಗಿದ್ದರು.

ತಿಲಕ್ ವರ್ಮಾ ಹಾಗೂ ಸಂಜು ಸ್ಯಾಮ್ಸನ್ ಜೊತೆಯಾಟ ಭಾರತ ತಂಡಕ್ಕೆ ಉಸಿರಾಟ ನೀಡಿತ್ತು. ಆದರೆ ಸಂಜು ಆಟ 24 ರನ್‌ಗೆ ಅಂತ್ಯವಾಗುವ ಮೂಲಕ ಆತಂಕ ಹೆಚ್ಚಾಗಿತ್ತು,

ತಿಲಕ್ ವರ್ಮಾ ಹೋರಾಟ ಟೀಂ ಇಂಡಿಯಾಗೆ ನೆರವಾಗಿತ್ತು. ಎಚ್ಚರಿಕೆ ಆಟವಾಡಿದ ತಿಲಕ್ ವರ್ಮಾ ಹಾಫ್ ಸೆಂಚುರಿ ಸಿಡಿಸಿದರು.

18ನೇ ಓವರ್‌ನ ಅಂತಿಮ ಎಸೆತದಲ್ಲಿ ಶಿವಂ ದುಬೆ ಸಿಕ್ಸರ್ ಸಿಡಿಸಿ ಪಂದ್ಯಕ್ಕೆ ತಿರುವು ನೀಡಿದರು. ಈ ಸಿಕ್ಸರ್ ಪಾಕಿಸ್ತಾನದ ಮೇಲೆ ಒತ್ತಡ ಹೆಚ್ಚಿಸುವಂತೆ ಮಾಡಿತ್ತು. ಇದರಿಂದ ಅಂತಿಮ 12 ಎಸೆತದಲ್ಲಿ ಭಾರತದ ಗೆಲುವಿಗೆ 17 ರನ್ ಅವಶ್ಯಕತೆ ಇತ್ತು. 18ನೇ ಓವರ್‌ನ ಕೊನೆಯ ಎಸೆತದಲ್ಲಿ ಭಾರತ ಮೇಲುಗೈ ಸಾಧಿಸಿದರೆ, 19ನೇ ಓವರ್‌ನ ಆರಂಭಿಕ ಮೂರು ಎಸೆತದಲ್ಲಿ ನಿರೀಕ್ಷಿತ ರನ್ ಬರಲಿಲ್ಲ. ಆದರೆ ನಾಲ್ಕನೇ ಎಸೆತದ ಬೌಂಡರಿ ಕೊಂಚ ನಿರಾಳರನ್ನಾಗಿ ಮಾಡಿತ್ತು. ಆದರೆ ಶಿವಂ ದುಬೆ 33 ರನ್ ಸಿಡಿಸಿ ಔಟಾದರು.

ಅಂತಿಮ 6 ಎಸೆತದಲ್ಲಿ ಭಾರತದ ಗೆಲುವಿಗೆ 10 ರನ್
ಕೊನೆಯ 6 ಎಸೆತದಲ್ಲಿ ಭಾರತದ ಗೆಲುವಿಗೆ 10 ರನ್ ಬೇಕಿತ್ತು. ಎರಡನೇ ಎಸೆತದಲ್ಲಿ ತಿಲಕ್ ವರ್ಮಾ ಭರ್ಜರಿ ಸಿಕ್ಸರ್ ಪಂದ್ಯದ ಗತಿ ಬದಲಿಸಿತ್ತು. ಬಳಿಕ 4 ಎಸೆತದಲ್ಲಿ ಭಾರತದ ಗೆಲುವಿಗೆ 2 ರನ್ ಅವಶ್ಯಕತೆ ಇತ್ತು. ರಿಂಕು ಸಿಂಗ್ ಬೌಂಡರಿ ಮೂಲಕ ಭಾರತ 5 ವಿಕೆಟ್ ಗೆಲುವು ಸಾಧಿಸಿತು. ತಿಲಕ್ ವರ್ಮಾ ಅಜೇಯ 69 ರನ್ ಸಿಡಿಸಿದರು.

ದುಬೈನಲ್ಲಿ ನಡೆದ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ.

41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು.

ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಕಿಸ್ತಾನದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿತು.

ಈ ಭರ್ಜರಿ ಗೆಲುವಿನೊಂದಿಗೆ ಭಾರತ ಒಂಬತ್ತನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದು ದಾಖಲೆ ನಿರ್ಮಿಸಿದೆ.

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು.

41 ವರ್ಷಗಳ ಏಷ್ಯಾಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಿತು. ಇಡೀ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಯಾವ ರೀತಿಯ ಮೇಲುಗೈ ಸಾಧಿಸಿತ್ತೋ ಅದೇ ರೀತಿ ಫೈನಲ್ ಪಂದ್ಯದಲ್ಲೂ ಪಾಕಿಸ್ತಾನದ ವಿರುದ್ಧ ವಿರೋಚಿತ ಪ್ರದರ್ಶನ ನೀಡಿ ಏಷ್ಯನ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾ ಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ