ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರಿನಾದ್ಯಂತ ಹಮ್ಮಿಕೊಳ್ಳಲAದ ವಿವಿಧ ಪ್ರಮುಖ ಕಾರ್ಯಕ್ರಮಗಳು ಮತ್ತು ಲೋಕೋಪಯೋಗಿ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆಯಿಂದ ರಾತ್ರಿಯವರೆಗೆ ಸಾಲುಸಾಲು ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ 11:30ಕ್ಕೆ ಕುಪ್ಪಣ್ಣ ಪಾರ್ಕ್ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆಗೊಳ್ಳಲಿದ್ದು, ಮಧ್ಯಾಹ್ನ 12:30ಕ್ಕೆ ಅಗ್ರಹಾರ ನೃತ್ಯ ಶಾಲೆಯಲ್ಲಿ ಪುಸ್ತಕ ಮೇಳ ಹಾಗೂ ವಸ್ತು ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ಮುಂದುವರಿದು, ಸಂಜೆ 4:00 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ, ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ಏಕಕಾಲಕ್ಕೆ ಉದ್ಘಾಟನೆಗೊಳ್ಳಲಿವೆ.
ಸಂಜೆ 4:30ಕ್ಕೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಶಿಬಿರ ಹಾಗೂ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುತ್ತದೆ. ನಂತರ ಸಂಜೆ 6:00 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ವೈಭವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.
ಅದೇ ದಿನದ ಸಂಜೆ 6:30ಕ್ಕೆ ಸಯ್ಯಾಜಿ ರಾವ್ ರಸ್ತೆಯಲ್ಲಿ ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಲಿದ್ದು, ರಾತ್ರಿ 7:30ಕ್ಕೆ ದಸರಾ ವಸ್ತು ಪ್ರದರ್ಶನವನ್ನು ಸಿಎಂ ಉದ್ಘಾಟಿಸಲಿದ್ದಾರೆ. ಸರಣಿ ಕಾರ್ಯಕ್ರಮಗಳ ಯಶಸ್ವಿ ಉದ್ಘಾಟನೆಯ ಬಳಿಕ ರಾತ್ರಿ 8:30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರಿನಿಂದ ಚನ್ನಪಟ್ಟಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ.