LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಿಮರೋಡಿಗೆ ಬಿಗ್ ರಿಲೀಫ್: ದಕ್ಷಿಣ ಕನ್ನಡದಿಂದ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು, ಸೆ.30 : ಮಹೇಶ್ ಶೆಟ್ಟಿ ತಿಮರೋಡಿಯನ್ನು 1 ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ, ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು.‌ ಇದಕ್ಕೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ತಿಮರೋಡಿಗೆ ಈಗ ತಾತ್ಕಾಲಿಕ ಜಯ ಸಿಕ್ಕಿದೆ.

ಅಕ್ಟೋಬರ್ 8 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ. ಪುತ್ತೂರಿನ ಎಸಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಹೊರಡಿಸಿದ್ದರು. ಬಳಿಕ ಫೊಕನ್ ಸ್ವಿಚ್ ಆಫ್ ಮಾಡಿ, ತಿಮರೋಡಿ ನಾಪತ್ತೆಯಾಗಿದ್ದರು.

ಇದೀಗ ತಿಮರೋಡಿ ನಿರೀಕ್ಷೆಯಂತೆ, ಅವರ ಪರ ಆದೇಶ ಬಂದಿದೆ. ಹೀಗಾಗಿ ಸದ್ಯಕ್ಕೆ 1 ಸಂಕಷ್ಟದಿಂದ ತಿಮರೋಡಿ ಪಾರಾಗಿದ್ದಾರೆ.ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಮನೆಯಲ್ಲಿ ಹೊಂದಿರುವ ಆರೋಪದಲ್ಲಿ ತಿಮರೋಡಿಗೆ 3 ನೋಟಿಸ್ ಜಾರಿಯಾಗಿದೆ. ಆದರೆ ವಿಚಾರಣೆಗೆ 3 ಬಾರಿಯೂ ಗೈರಾಗಿರುವ ತಿಮರೋಡಿ, ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST