LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾಸ್ವಾಮಿ ಕೊಲೆ ಕೇಸ್‌: ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ - ಡಿ ಗ್ಯಾಂಗ್‌ಗೆ ಬಿಗ್ ರಿಲೀಫ್

ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ನಟ ದರ್ಶನ್ ತೂಗುದೀಪ, ನಟಿ ಪವಿತ್ರಾ ಗೌಡ ಮತ್ತು ಇತರ ಐವರಿಗೆ ನೀಡಲಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಆದರೆ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿದೆ. ಹೌದು. ಕರ್ನಾಟಕ ಹೈಕೋರ್ಟ್‌ನ ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲ ಮತ್ತು ಆರ್ ಮಹಾದೇವನ್ ಅವರ ಪೀಠವು ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ದರ್ಶನ್ ಹಾಗೂ ಗ್ಯಾಂಗ್‌ಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಎತ್ತಿ ಹಿಡಿದಿದೆ.

ಹೀಗಾಗಿ ದರ್ಶನ್ ಹಾಗೂ ಗ್ಯಾಂಗ್‌ಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಕರ್ನಾಟಕ ಹೈಕೋರ್ಟ್ ಡಿಸೆಂಬರ್ 13, 2024 ರಂದು ನಟ ದರ್ಶನ್ ಮತ್ತು ಇತರರಿಗೆ ಜಾಮೀನು ನೀಡಿತು. ಜಾಮೀನು ಮಂಜೂರು ಮಾಡುವ ಮೊದಲು, ನಟನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.

ಆದರೆ ಇತರ ಕೆಲವು ಜೈಲು ಕೈದಿಗಳೊಂದಿಗೆ ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ವೈರಲ್ ಆದ ನಂತರ, ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದರೆ, ಪವಿತ್ರಾ ಗೌಡ ಮೊದಲನೇ ಆರೋಪಿ, ಜಗದೀಶ್ ಆರನೇ ಆರೋಪಿ, ಅನುಕುಮಾರ್ ಏಳನೇ ಆರೋಪಿ, ಆರ್ ನಾಗರಾಜ್ 11ನೇ ಆರೋಪಿ, ಎಂ ಲಕ್ಷ್ಮಣ್ 12ನೇ ಆರೋಪಿ ಹಾಗೂ 14ನೇ ಆರೋಪಿ ಪ್ರದೋಶ್ ಜಾಮೀನು ಅನ್ನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಸೇವೆ ಸ್ಥಗಿತಕಳೆದ ತಿಂಗಳು ಗುಜರಿ ಮಾರಿ 800 ಕೋಟಿ ರೂಪಾಯಿ ಗಳಿಸಿದ ಕೇಂದ್ರ!ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆಆತ್ಮಗಳು ಎಲ್ಲಿ ವಾಸವಾಗಿರುತ್ತದೆ ಹಾಗೂ ಯಾರಿಗೆ ತೊಂದರೆ ಕೊಡುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?ಹಿರೆಮದಕರಿನಾಯಕರ ಧರ್ಮಪತ್ನಿ ಗಂಡೋಬಳವ್ವ ನಾಗತಿ ಅವರ ಚಿತ್ರ ಅನಾವರಣ.!ವಚನ.: -ಕನ್ನಡಿಕಾಯಕದ ಅಮ್ಮಿದೇವಯ್ಯRSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್