Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

BIG NEWS: ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳೋ ಭಕ್ತರಿಗೆ ಬಿಗ್ ಶಾಕ್: ಪ್ರಮುಖ ಸೇವಾ ದರ ಪರಿಷ್ಕರಣೆ

ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರವಾದ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಪ್ರಮುಖ ಧಾರ್ಮಿಕ ಸೇವೆಗಳ ದರವನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ. ದೇವಸ್ಥಾನದಲ್ಲಿ ನೆರವೇರುವ ಬೆಳ್ಳಿ ರಥೋತ್ಸವ ಹಾಗೂ ಪಂಚಾಮೃತ ಮಹಾಭಿಷೇಕ ಸೇವೆಗಳ ದರವನ್ನು ಹೆಚ್ಚಿಸಲಾಗಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಈ ನೂತನ ದರಗಳು ಅನ್ವಯವಾಗಲಿವೆ.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು (ಇಒ) 2026ರ ಮೇ 20 ರಂದು ಸೇವಾ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಕಚೇರಿಯು ಈ ಅನುಮೋದನೆ ನೀಡಿದ್ದು, ಅಧಿಕೃತ ಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದೆ.

ಪರಿಷ್ಕೃತ ಸೇವಾ ದರಗಳ ಸಂಪೂರ್ಣ ವಿವರ

ನೂತನ ಆದೇಶದ ಪ್ರಕಾರ, ಭಕ್ತರು ನೆರವೇರಿಸುವ ಎರಡು ಪ್ರಮುಖ ಸೇವೆಗಳ ದರ ಹಾಗೂ ಅದರ ಖರ್ಚು-ವೆಚ್ಚಗಳ ಹಂಚಿಕೆಯನ್ನು ಇಲಾಖೆ ಸ್ಪಷ್ಟವಾಗಿ ನಿಗದಿಪಡಿಸಿದೆ:

ಬೆಳ್ಳಿ ರಥೋತ್ಸವ ಸೇವೆಗೆ ಒಟ್ಟು 12,000 ರೂಪಾಯಿ ನಿಗದಿಪಡಿಸಲಾಗಿದೆ. ಇದರಲ್ಲಿ ದೇವಸ್ಥಾನದ ಆಡಳಿತ ನಿಧಿಗೆ 3,000 ರೂಪಾಯಿ ಸಂದಾಯವಾಗಲಿದ್ದು, ಸೇವೆಗೆ ಅಗತ್ಯವಿರುವ ಪೂಜಾ ಸಾಮಗ್ರಿ ಹಾಗೂ ಇತರೆ ಪದಾರ್ಥಗಳ ವೆಚ್ಚಕ್ಕಾಗಿ 9,000 ರೂಪಾಯಿ ಮೀಸಲಿಡಲಾಗಿದೆ.

ಪಂಚಾಮೃತ ಮಹಾಭಿಷೇಕ ಸೇವೆಗೆ ಒಟ್ಟು 11,000 ರೂಪಾಯಿ ನಿಗದಿಯಾಗಿದೆ. ಇದರಲ್ಲಿ 1,000 ರೂಪಾಯಿ ದೇವಸ್ಥಾನದ ನಿಧಿಗೆ ಜಮೆಯಾದರೆ, ಮಹಾಭಿಷೇಕಕ್ಕೆ ಬೇಕಾಗುವ ಪದಾರ್ಥಗಳು ಮತ್ತು ಅಗತ್ಯ ಸಾಮಗ್ರಿಗಳ ವೆಚ್ಚಕ್ಕೆ 10,000 ರೂಪಾಯಿ ನಿಗದಿ ಮಾಡಲಾಗಿದೆ.

ಮೂರು ವರ್ಷಗಳ ಕಾಲ ನೂತನ ದರ ಜಾರಿ

ಧಾರ್ಮಿಕ ಸೇವೆಗಳನ್ನು ನಡೆಸಲು ಮಾರುಕಟ್ಟೆಯಲ್ಲಿ ಅಗತ್ಯವಿರುವ ಸಾಮಗ್ರಿಗಳು ಮತ್ತು ಪದಾರ್ಥಗಳ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಪರಿಷ್ಕರಣೆ ಮಾಡಲಾಗಿದೆ. ಸೇವೆಗಳ ಸುಗಮ ನಿರ್ವಹಣೆಗೆ ಪೂರಕವಾಗಿ ಸಾಮಗ್ರಿಗಳ ವೆಚ್ಚವನ್ನು ಪ್ರತ್ಯೇಕವಾಗಿ ನಮೂದಿಸಿರುವುದು ಈ ಬಾರಿಯ ದರಪಟ್ಟಿಯ ವೈಶಿಷ್ಟ್ಯವಾಗಿದೆ. ಈ ಪರಿಷ್ಕೃತ ದರಗಳು ಮುಂದಿನ ಮೂರು ವರ್ಷಗಳ ಕಾಲ ಚಾಲ್ತಿಯಲ್ಲಿರಲಿವೆ.

ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯು ಹೊರಡಿಸಿರುವ ಆದೇಶದ ಪ್ರತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಗೆ ರವಾನಿಸಲಾಗಿದೆ. ನಾಗದೋಷ ನಿವಾರಣೆ ಹಾಗೂ ಹರಕೆ ತೀರಿಸಲು ಪ್ರತಿದಿನ ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ಇನ್ಮುಂದೆ ಈ ಪ್ರಮುಖ ಸೇವೆಗಳನ್ನು ಕೈಗೊಳ್ಳಲು ಭಕ್ತರು ಪರಿಷ್ಕೃತ ದರ ಪಾವತಿಸಬೇಕಿದೆ.

news_1792686166_0_604.webp

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!