ಹೈಲೈಟ್ಸ್:
ರಾಜ್ಯದ ವಿವಿಧ ಜಿಲ್ಲೆಗಳ 23 ಸರ್ಕಾರಿ ಪ್ರೌಢಶಾಲೆಗಳಿಗೆ ಪಿಯು ಕಾಲೇಜು ಹುದ್ದೆ ನೀಡಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ವಾಣಿಜ್ಯ ವಿಭಾಗದಲ್ಲಿ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಕಂಪ್ಯೂಟರ್ ಸೈನ್ಸ್ ಸಂಯೋಜನೆಗೆ ಅನುಮತಿ.
ಬೆಂಗಳೂರು: 2025-26ನೇ ಸಾಲಿನ ಬಜೆಟ್ ಘೋಷಣೆಯಂತೆ, ರಾಜ್ಯದ ವಿವಿಧ ಜಿಲ್ಲೆಗಳ 23 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಜ್ಞಾಪನ ಪತ್ರ ಬಿಡುಗಡೆ ಮಾಡಿದ್ದಾರೆ.
ಈ ನೂತನ ಕಾಲೇಜುಗಳು 2026-27ನೇ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿವೆ. ಎಲ್ಲ ಕಾಲೇಜುಗಳಲ್ಲೂ ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಗಣಕ ವಿಜ್ಞಾನ ಸಂಯೋಜನೆಗೆ ಅನುಮೋದನೆ ನೀಡಲಾಗಿದೆ. ಪ್ರಥಮ ಭಾಷೆಯಾಗಿ ಕನ್ನಡ ಮತ್ತು ದ್ವಿತೀಯ ಭಾಷೆಯಾಗಿ ಇಂಗ್ಲಿಷ್ ಬೋಧನೆಗೆ ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಕರ ನಿಯೋಜನೆ:
ಹೊಸ ಕಾಲೇಜುಗಳಲ್ಲಿ ಭಾಷಾ ಬೋಧನೆ ಸುಗಮವಾಗಲು ಕಡಿಮೆ ಕಾರ್ಯಭಾರ ಹೊಂದಿರುವ ಉಪನ್ಯಾಸಕರನ್ನು ನಿಯೋಜಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.