LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾರ್ಕಳ ಪರಶುರಾಮ ಪ್ರತಿಮೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಕಾರ್ಕಳ: ಬೈಲೂರು ಗ್ರಾಮದ ಉಮಿಕಲ್‌ ಬೆಟ್ಟದ ಮೇಲೆ 10 ಕೋಟಿ ರೂ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗಿರುವ 35 ಅಡಿ ಎತ್ತರದ ಪರಶುರಾಮ ದೇವರ ವಿಗ್ರಹ ಕೊನೆಗೂ ನಕಲಿ ಎಂದು ಸಾಬೀತಾಗಿದ್ದು, ಈ ಕುರಿತು ಶಿಲ್ಪಿ ಮತ್ತು ಉಡುಪಿ ನಿರ್ಮಿತಿ ಕೇಂದ್ರದ ಇಬ್ಬರು ಅಧಿಕಾರಿಗಳ ಮೇಲೆ ಕಾರ್ಕಳ ತಾಲೂಕು ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

2024 ರಲ್ಲಿ ಕೃಷ್ಣ ಶೆಟ್ಟಿ ಎಂಬುವವರು ನೀಡಿದ ದೂರಿನಂತೆ ಪ್ರಕರಣದ ತನಿಖೆ ಆಗುತ್ತಿದೆ. ಉಡುಪಿ ನಿರ್ಮಿತಿ ಕೇಂದ್ರಕ್ಕೆ ಬೆಂಗಳೂರಿನ ಕ್ರಿಶ್‌ ಆರ್ಟ್‌ ವರ್ಲ್ಡ್‌ನ ಶಿಲ್ಪಿ ಕೃಷ್ಣ ನಾಯ್ಕ್‌ ಅವರು ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪನೆ ಮಾಡಲು ಹಣ ನೀಡಿತ್ತು. ಆದರೆ ಪ್ರತಿಮೆ ಫೈಬರ್ ಅಲ್ಲ ಹಿತ್ತಾಳೆಯಿಂದ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ನಿರ್ಮಿತಿ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌ ಮತ್ತು ಎಂಜಿನಿಯರ್‌ ಸಚಿನ್‌ ವೈ ಕುಮಾರ್‌ ಅವರು ವಿಗ್ರಹ ನಿರ್ಮಾಣದ ವರ್ಕ್‌ ಅರ್ಡರ್‌ನಲ್ಲಿದ್ದ ಷರತ್ತುಗಳನ್ನು ಪಾಲಿಸಿರಲಿಲ್ಲ. ಕಾರ್ಕಳ ಪೊಲೀಸರು ಶಿಲ್ಪಿ ಕೃಷ್ಣ ನಾಯ್ಕ್‌, ನಿರ್ಮಿತಿ ಕೇಂದ್ರದ ಅರುಣ ಕುಮಾರ್‌ ಹಾಗೂ ಸಚಿನ್‌ ವೈ ಕುಮಾರ್‌ ಅವರು ಒಳಸಂಚು, ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಅವರ ವಿರುದ್ಧ ಕಾರ್ಕಳ ತಾಲೂಕು ನ್ಯಾಯಾಲಯಕ್ಕೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026