LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Bigg Boss Kannada : ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?

ಬಿಗ್ಬಾಸ್ ಮನೆಯಲ್ಲಿ ಮತ್ತೆ ರಜತ್ ಹಾಗೂ ಧನರಾಜ್ ನಡುವೆ ಜಟಾಪಟಿ ನಡೆದಿದೆ. ಈ ವಾರದ ಕಳಪೆ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ಉಳಿದ ಸ್ಪರ್ಧಿಗಳು ಇಬ್ಬರ ನಡುವಿನ ಮಾರಾಮಾರಿ ತಪ್ಪಿಸಿ ನಿಟ್ಟುಸಿರು ಬಿಟ್ಟಿದ್ದಾರೆ.

ಹೌದು ಬಿಗ್ಬಾಸ್ ಮನೆಯಲ್ಲಿ ಉತ್ತಮ ಮತ್ತು ಕಳಪೆ ನೀಡುವ ಪ್ರಕ್ರಿಯೆ ನಡೆಯುತ್ತಿತ್ತು. ಅಂತೆಯೇ ಧನು ಅವರು ಕಳಪೆಗೆ ರಜತ್ ಅವರ ಹೆಸರನ್ನು ಹೇಳಿದ್ದಾರೆ. ಅದಕ್ಕೆ ಕಾರಣ ಕೂಡ ಕೊಟ್ಟಿದ್ದಾರೆ. ನನ್ನ ಕಳಪೆ ಬಂದುಬಿಟ್ಟು ರಜತ್. ಕೈಕಾಲು ಮುರೀತಿನಿ ಅಂತಾರೆ, ಬೆದರಿಕೆ ಹಾಕೋ ಥರಾ ಅವರ ಮಾತುಗಳು ಇರುತ್ತದೆ ಎಂದು ಕಿಡಿಕಾರಿದ್ದಾರೆ.

ಧನು ಮಾತಿಗೆ ಅಲ್ಲೇ ಕೌಂಟರ್ ನೀಡುವ ರಜತ್.. ಧನು ಜೊತೆಗೆ ನಡೆದ ಒಂದು ಪ್ರಸಂಗವನ್ನು ರಜತ್ ನೆನಪಿಸಿಕೊಂಡರು. ಅಂದು ನೀವು ನನ್ನ ಮುಖವನ್ನು ಟಚ್ ಮಾಡಿದಾಗ ಅದು, ಸಾಫ್ಟ್ ಆಗಿರಲಿಲ್ಲ. ಅದಕ್ಕೆ ಧನು, ‘ನನಗೆ ಗೊತ್ತು, ನಾನು ಎಷ್ಟು ಸಾಫ್ಟ್ ಆಗಿ ಮಾಡಿದ್ದೀನಿ’ ಎಂದು ಅಂತಾ ಹೇಳ್ತಾರೆ. ‘ನಾನೇನು ನಿನ್ನೆ ಮೊನ್ನೆ ಹುಟ್ಟಿ ಬಿಗ್ಬಾಸ್ಗೆ ಬಂದಿಲ್ಲ.

ನನಗೆ ಬರ್ತಿರೋ ಸಿಟ್ಟಿಗೆ ನಿನ್ನ ಮಕ-ಮೂತಿ ಒಡೆದು ಹಾಕಿಯೇ ಆಚೆ ಹೋಗಬೇಕಾಗಿತ್ತು ಎಂದು ರಜತ್ ಹೇಳ್ತಾರೆ ಅದಕ್ಕೆ ಕೋಪಿಸಿಕೊಂಡ ಧನು, ಅದೇನೋ ಮುಕ-ಮೂತಿ ಒಡೆಯುತ್ತೀನಿ ಅಂದ್ರಲ್ಲ. ಹೊಡೆಯಿರಿ ನೋಡೋಣ ಎನ್ನುತ್ತಾರೆ. ಅದಕ್ಕೆ ನಿಂಗೆ ತಾಖತ್ತಿದ್ದರೆ ನನ್ನ ಮುಟ್ಟಿ ತೋರಿಸೋ ಎಂದು ಧನು ಮೇಲೆ ರಜತ್ ಮತ್ತಷ್ಟು ಗರಂ ಆಗ್ತಾರೆ. ಅಷ್ಟಕ್ಕೂ ಸುಮ್ಮನಾಗದ ಧನು ಹೊಡೆಯುತ್ತೀರಾ.. ಹೊಡೆಯಿರಿ.. ಎಂದಿದ್ದಾರೆ. ರೊಚ್ಚಿಗೇಳುವ ರಜತ್, ಧನು ಮೇಲೆ ಕೈಮಾಡಲು ಹೋಗಿದ್ದಾರೆ. ಅಷ್ಟರಲ್ಲೇ ಉಳಿದ ಸ್ಪರ್ಧಿಗಳು ತಡೆಯುವ ಪ್ರಯತ್ನ ಮಾಡಿದ್ದಾರೆ. ಮುಂದೆ ಏನಾಗಿದೆ ಅನ್ನೋದು ಇಂದು ರಾತ್ರಿ 9.30ಕ್ಕೆ ಗೊತ್ತಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!ಸರ್ವಾರ್ಥ ಸಿದ್ಧಿ ಯೋಗ: ಲವರ್ ಸಪೋರ್ಟ್, ಶತ್ರುಗಳು ಉಡೀಸ್! ಈ 5 ರಾಶಿಗಳಿಗೆ ಶುಕ್ರದೆಸೆ