LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಿಗ್‌ಶಾಕ್: ಇನ್ಮುಂದೆ ಪ್ರತಿ ತಿಂಗಳು ಹಣ ಸಿಗಲ್ಲ

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸಾಮಾಜಿಕವಾಗಿ ಮಾದರಿಯಾಗಿದ್ದಾರೆ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಹಾಕುತ್ತೇವೆ. ಪ್ರತಿ ತಿಂಗಳು ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್‌ಎಂ ರೇವಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವ. ಜಿಎಸ್ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ ಎಂದರು. ಹೀಗಾಗಿ ಪ್ರತಿ ತಿಂಗಳು ಹಣ ಕೊಡಲು ಆಗುತ್ತಿಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ರಾಜ್ಯದ ಯಜಮಾನಿಯರು ಗೃಹಲಕ್ಷ್ಮಿ ಹಣ ಖಾತೆಗೆ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಹೆಚ್‌ಎಂ ರೇವಣ್ಣ ಈ ಒಂದು ಹೇಳಿಕೆ ನೀಡಿದ್ದು, ಗೃಹಲಕ್ಷ್ಮಿ ಫಲಾನುಭವಿಗಳು ಅಸಮಾಧಾನ ಹೊರ ಹಾಕಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026