ಪಾಟ್ನಾ: ಕಳೆದ ಮಾರ್ಚ್ 16ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಹಾರದ ದೀರ್ಘಾವಧಿಯ ಮುಖ್ಯಮಂತ್ರಿ Nitish Kumar ಅವರು ಇಂದು (ಮಾ. 30) ಬಿಹಾರ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶೀಘ್ರದಲ್ಲೇ ಅವರು ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸಿಎಂ ನಿತೀಶ್ ಕುಮಾರ್ ಅವರ ರಾಜೀನಾಮೆ ಪತ್ರವನ್ನು ಜೆಡಿಯು ಎಂಎಲ್‌ಸಿ Sanjay Gandhi ವಿಧಾನಪರಿಷತ್ತಿಗೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ Awadhesh Narayan Singh ತಿಳಿಸಿದ್ದಾರೆ.
ಮಾರ್ಚ್ 16ರಂದು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂವಿಧಾನಾತ್ಮಕ ನಿಯಮಗಳ ಪ್ರಕಾರ, ರಾಜ್ಯ ವಿಧಾನಮಂಡಲದ ಸದಸ್ಯರು ಸಂಸತ್ತಿಗೆ ಆಯ್ಕೆಯಾದರೆ, 14 ದಿನಗಳ ಒಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಎಂಎಲ್‌ಸಿ ಸ್ಥಾನ ತ್ಯಜಿಸಿರುವ ನಿತೀಶ್ ಕುಮಾರ್ ಅವರು ಆರು ತಿಂಗಳೊಳಗೆ ಸಿಎಂ ಹುದ್ದೆಯಿಂದಲೂ ಹಿಂದೆ ಸರಿಯಬೇಕಾದ ಪರಿಸ್ಥಿತಿ ಉಂಟಾಗಿದೆ. ರಾಜ್ಯ ವಿಧಾನಸಭೆಯ ಯಾವುದೇ ಸದನದ ಸದಸ್ಯರಾಗಿರದಿದ್ದರೆ, ಅಧಿಕಾರದ ಹುದ್ದೆಯನ್ನು ಮುಂದುವರಿಸಲು ಸಾಧ್ಯವಿಲ್ಲ. ಈ ಕಾರಣದಿಂದ ಅವರು ಶೀಘ್ರದಲ್ಲೇ ಸಿಎಂ ಸ್ಥಾನ ತ್ಯಜಿಸುವ ಸಾಧ್ಯತೆ ಇದೆ.
ಸಿಎಂ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಹೆಚ್ಚಳ
ಇಂದು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿಎಂ ನಿತೀಶ್ ಕುಮಾರ್, ಇನ್ನೂ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಬಹುದು ಎಂಬ ನಿರೀಕ್ಷೆ ಇದೆ. ಇದರಿಂದ ಬಿಹಾರದಲ್ಲಿ ಹೊಸ ನಾಯಕತ್ವದಡಿ ಸರ್ಕಾರ ರಚನೆಗೆ ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ.
ಬಿಹಾರದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ತನ್ನದೇ ಮುಖ್ಯಮಂತ್ರಿಯನ್ನು ಹೊಂದುವ ಸಾಧ್ಯತೆ ವ್ಯಕ್ತವಾಗಿದ್ದು, ಸಿಎಂ ಹುದ್ದೆಗೆ ತೀವ್ರ ಪೈಪೋಟಿ ಆರಂಭವಾಗಿದೆ ಎಂದು ವರದಿಗಳು ಸೂಚಿಸುತ್ತಿವೆ. Rashtriya Swayamsevak Sangh ಹಿನ್ನೆಲೆಯ ನಾಯಕರೊಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.