ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಕೆಆರ್ ಪುರ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೈರತಿ ಬಸವರಾಜ್ ಅವರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಸಿಐಡಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆ ಮುಂದೂಡಿದೆ. ಮಾರ್ಚ್ 12ರಂದು ಜನಪ್ರತಿನಿಧಿಗಳ ನ್ಯಾಯಾಲಯ ಬೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

